Monday, May 6, 2024

ನೇಹ ಹಿರೇಮಠ್ ಕೊಲೆ ಪ್ರಕರಣ : ಡಿಬಾಸ್​ ದರ್ಶನ್​ ಸೇರಿದಂತೆ ಸಿನಿ ತಾರೆಯಿಂದ ಖಂಡನೆ!

ಬೆಂಗಳೂರು : ಪ್ರೀತಿ ವಿಚಾರಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಎಂಬ ಯುವತಿಯ ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಸಂಬಂಧಿಸಿ ಆರೋಪಿ ಫಯಾಜ್‌ನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯನ್ನು ಖಂಡಿಸಿ ಕನ್ನಡ ಚಿತ್ರರಂಗದ ಸಿನಿಮಾ ತಾರೆಯರು ಕೂಡ ಧ್ವನಿ ಎತ್ತಿದ್ದಾರೆ.

ಸ್ಯಾಂಡಲ್​ವುಡ್​ ಸ್ಟಾರ್​ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ, ನಟಿ ಪ್ರಿಯಾ ಸವದಿ, ನಟಿ ಕಾವ್ಯಾ ಶಾಸ್ತ್ರಿ, ರಚಿತಾ ರಾಮ್‌. ರಿಷಬ್‌ ಶೆಟ್ಟಿ, ಶಿವಣ್ಣ ಪೋಸ್ಟ್‌ ಬೆನ್ನಲ್ಲೇ ಇದೀಗ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​, ಕುಮಾರಸ್ವಾಮಿ, ವಿಜಯೇಂದ್ರ ವಿರುದ್ದ FIR ದಾಖಲು

ಇನ್ನು, ಚಾಲೆಂಜಿಂಗ್ ಸ್ಟಾರ್​ ದರ್ಶನ್‌ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು ʻʻಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿʼʼಎಂದು ಬರೆದುಕೊಂಡಿದ್ದಾರೆ.

ರಿಷಬ್‌ ಶೆಟ್ಟಿ ಪೋಸ್ಟ್‌ನಲ್ಲಿ ʻʻನೇಹಾ ಹೀರೆಮಠ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುಬ ಸಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಶಿವರಾಜ್‌ ಕುಮಾರ್‌ ಅವರು ಪೋಸ್ಟ್‌ನಲ್ಲಿ ʻʻಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ” ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES