Wednesday, May 8, 2024

ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ : RCB ಪ್ಲೇಆಪ್ ಕನಸು ನನಸಾಗುವುದೇ? ಕಾಮೆಂಟ್ ಮಾಡಿ

ಬೆಂಗಳೂರು : ಕೊಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಟಾಸ್ ಗೆದ್ದಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇಂದು RCB ಹಸಿರು ಜೆರ್ಸಿಯಲ್ಲಿ ಕಣಕ್ಕೆ ಇಳಿಯಲಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಈ ರೋಚಕ ಪಂದ್ಯ ನಡೆಯುತ್ತಿದೆ. ಪ್ಲೇಆಪ್​ ಕನಸು ನನಸಾಗಬೇಕು ಎಂದರೆ ಇಂದಿನ ಪಂದ್ಯವನ್ನು ಆರ್​ಸಿಬಿ ಗೆಲ್ಲಲೇಬೇಕಿದೆ.

ಆರ್​ಸಿಬಿ ಆಡಿರುವ 7 ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದಿದೆ. 6 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. 2 ಅಂಕದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಕೆಕೆಆರ್​ ಆಡಿರುವ 6 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು, 2 ಪಂದ್ಯ ಸೋತಿದೆ. 8 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ.

ಐಪಿಎಲ್​ ಇತಿಹಾಸದಲ್ಲಿ ಉಭಯ ತಂಡಗಳು ಈವರೆಗೆ ಒಟ್ಟು 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 14 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಕೊಲ್ಕತ್ತಾ ನೈಟ್‌ ರೈಡರ್ಸ್‌ 19 ಪಂದ್ಯ ಗೆದ್ದು ಮೇಲುಗೈ ಸಾಧಿಸಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆದ ಪಂದ್ಯಗಳಲ್ಲೂ ಕೆಕೆಆರ್​ ಮೇಲುಗೈ ಸಾಧಿಸಿದೆ. ಇಲ್ಲಿ ಒಟ್ಟು 11 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಕೇವಲ 4 ಪಂದ್ಯ ಗೆದ್ದಿದೆ. ಕೊಲ್ಕತ್ತಾ ನೈಟ್‌ ರೈಡರ್ಸ್‌ 7 ಪಂದ್ಯದಲ್ಲಿ ಗೆದ್ದು ಬೀಗಿದೆ.

ಕೊಲ್ಕತ್ತಾ ನೈಟ್‌ ರೈಡರ್ಸ್‌

ಫಿಲಿಪ್ ಸಾಲ್ಟ್(ವಿ.ಕೀ.), ಸುನಿಲ್ ನರೈನ್, ಆಂಗ್‌ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್(ನಾಯಕ), ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್(ವಿ.ಕೀ.), ಮಹಿಪಾಲ್ ಲೊಮ್ರೋರ್, ಕರಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಸಿರಾಜ್

RELATED ARTICLES

Related Articles

TRENDING ARTICLES