Saturday, May 4, 2024

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣೆಗೆ ಇನ್ನೇನು ದಿನಗಣನೆ ಪ್ರಾರಂಭ ಆಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದೆಡೆ ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಡಾ.ಕೆ. ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಇಂದು ತಮ್ಮ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಪೆರೆಸಂದ್ರ ಗ್ರಾಮದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬಯಲು ಸೀಮೆಯ ಭಾಗಕ್ಕೆ ಶಾಶ್ವತವಾದ ಕುಡಿಯುವ ನೀರಿನ ಯೋಜನೆಯನ್ನು ರೂಪಿಸುವುದು, ಎತ್ತಿನ ಹೊಳೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯ ಆಗಿ ಘೋಷಣೆ ಮಾಡುವ ಬಗ್ಗೆ ಕೇಂದ್ರ ಸರ್ಕಾರದ ಚರ್ಚೆ ನಡೆಸುವುದು. ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ರೀಡಾ ಗ್ರಾಮಗಳನ್ನು ನಿರ್ಮಾಣ ಮಾಡುವುದು. ಚಿಕ್ಕಬಳ್ಳಾಪುರ ನಂದಿ ವೈದ್ಯಕೀಯ ಹಾಗೂ ಸಂಶೋಧನಾ ಕೇಂದ್ರದ ಅಭಿವೃದ್ಧಿಯನ್ನು ಮಾಡಿ ಆರೋಗ್ಯ ನಗರವನ್ನಾಗಿ ರೂಪಿಸುವ ಭರವಸೆ ನೀಡಿದ್ದಾರೆ.

ಬೆಂಗಳೂರಿಗೆ ಪರ್ಯಾಯವಾಗಿ ಉಪನಗರ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಹಾಗೂ ಹೊಸಕೋಟೆ ನಗರಗಳನ್ನು ಬೆಂಗಳೂರಿಗೆ ಪರ್ಯಾಯವಾಗಿ ಉಪನಗರಗಳನ್ನಾಗಿ ಬೆಳೆಸುವುದು ಸೇರಿದಂತೆ ಪ್ರಣಾಳಿಕೆ ಯಲ್ಲಿ ಹತ್ತು ಹಲವು ಭರವಸೆಗಳನ್ನ ಜನರಿಗೆ ಬಿಡುಗಡೆ ಮಾಡಿದ್ದಾರೆ.

ನೆನೆಗುದಿಗೆ ಬಿದ್ದಿರುವ ಎತ್ತಿನಹೊಳೆ ಪೂರ್ಣ

ಇನ್ನೂ ಪ್ರಮುಖವಾಗಿ ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಿ ಬಯಲು ಸೀಮೆ ಪ್ರದೇಶಕ್ಕೆ ನೀರಿನ ಸಮಸ್ಯೆ ನಿವಾರಿಸುವ ಪಣವನ್ನು ಡಾ.ಕೆ. ಸುಧಾಕರ್ ತೊಟ್ಟಿದ್ದಾರೆ. ಸಿಲಿಕಾನ್ ಸಿಟಿಗೆ ಸಮೀಪದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಪರ್ಯಾಯ ನಗರಗಳನ್ನಾಗಿ ಮಾಡುವುದು ಪ್ರಣಾಳಿಕೆಯ ಪ್ರಮುಖ ಅಂಶಗಳಾಗಿವೆ.

ಒಟ್ಟಾರೆ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಮನಗೊಂಡಿರುವ ಸುಧಾಕರ್ ಅವರು ಸಮಸ್ಯೆಗಳನ್ನು ಬಗೆಹರಿಸಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆ ಮೈತ್ರಿ ಅಭ್ಯರ್ಥಿ ಸುಧಾಕರ್ ಗೆಲ್ಲಲ್ಲು ಸಹಕಾರಿ ಆಗಲಿದೆ.

RELATED ARTICLES

Related Articles

TRENDING ARTICLES