Saturday, May 4, 2024

ಸೂರತ್​ನಲ್ಲಿ ಅರಳಿದ ಮೊದಲ ‘ಕಮಲ’ : ಮೋದಿ 400ಕ್ಕೆ ಬಾಕಿ 399

ಗುಜರಾತ್ : ಲೋಕಸಭಾ ಚುನಾವಣೆ ನಡೆಯುವುದಕ್ಕಿಂತ ಮೊದಲೇ ಬಿಜೆಪಿ ಅಭ್ಯರ್ಥಿಯೊಬ್ಬರು ಗೆಲುವು ದಾಖಲಿಸಿದ್ದಾರೆ.

ಗುಜರಾತ್​ನ ಸೂರತ್​ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಕಮಲ ಅರಳಿದೆ. ಮೋದಿಯವರ 400ಕ್ಕೆ 399 ಬಾಕಿಯಿದೆ ಎಂದು ಬಿಜೆಪಿ ನಾಯಕರು ಮೊದಲ ಗೆಲುವಿನ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಸೂರತ್ ಕ್ಷೇತ್ರದ ಅಭ್ಯರ್ಥಿ ಮುಖೇಶ್​ ದಲಾಲ್​ ಈ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರಣ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿದರೆ, 8 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರೆಲ್ಲರೂ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಇವರ ನಾಮಪತ್ರ ತಿರಸ್ಕಾರಕ್ಕೆ ಸೂಚಕರ ಸಹಿಯಲ್ಲಿನ ವ್ಯತ್ಯಾಸವೇ ಕಾರಣ. ಇದರೊಂದಿಗೆ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವೂ ಅಸಿಂಧುಗೊಂಡಿದೆ.

ಮೋದಿಗೆ ಮೊದಲ ಕಮಲ ಉಡುಗೊರೆ

ಗುಜರಾತ್ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್​ ಈ ಮಾಹಿತಿಯನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲ ಕಮಲವನ್ನು ಉಡುಗೊರೆಯಾಗಿ ಸೂರತ್ ನೀಡಿದೆ. ಅವಿರೋಧವಾಗಿ ಆಯ್ಕೆಯಾದ ನಮ್ಮ ಪಕ್ಷದ ಅಭ್ಯರ್ಥಿ ಮುಕೇಶ್ ಅವರಿಗೆ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES