Saturday, May 4, 2024

ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ!

ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಳ್ಳಾರಿ, ದಾವಣಗೆರೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯೊಳಗಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇಂದು ಹವಾಮಾನ ವರದಿ ತಿಳಿಸಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ನೆಹ ಕೊಲೆ: ಆರೋಪಿಗೆ ಕಠಿಣ ಶಿಕ್ಷೆಯಾಗಲಿ- ಅಶ್ವಿನಿ ಪುನೀತ್ ರಾಜ್​ಕುಮಾರ್​

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

RELATED ARTICLES

Related Articles

TRENDING ARTICLES