Saturday, May 4, 2024

ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ!

ಬೆಂಗಳೂರು : ಪ್ರಸಿದ್ಧ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಶುರುವಾಗಿದ್ದು, ನಾಳೆ ಕರಗ ಶಕ್ತ್ಯೋತ್ಸವ ನಡೆಯಲಿದೆ.

ಕರಗ ಉತ್ಸವದ ಹಿನ್ನೆಲೆ ಮುನ್ನೆಚ್ಚರಿಕೆ ಸಲುವಾಗಿ ಏಪ್ರಿಲ್​.23ರ ಬೆಳಗ್ಗೆ 6 ರಿಂದ ಏ. 24 ಬೆಳಗ್ಗೆ ‌10 ಗಂಟೆಯವರೆಗೆ ಬೆಂಗಳೂರಿನ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಇದನ್ನೂ ಓದಿ: ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ!

ಇನ್ನು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾದ್ಯತೆಯಿದ್ದು, ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಈ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್. ಜೆ. ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಕಮಿಷನರ್ ದಯಾನಂದ ಅವರು ಅದೇಶಿಸಿದ್ದಾರೆ.

RELATED ARTICLES

Related Articles

TRENDING ARTICLES