Monday, May 6, 2024

ನೆಹ ಕೊಲೆ: ಆರೋಪಿಗೆ ಕಠಿಣ ಶಿಕ್ಷೆಯಾಗಲಿ- ಅಶ್ವಿನಿ ಪುನೀತ್ ರಾಜ್​ಕುಮಾರ್​

ಬೆಂಗಳೂರು: ನಟ ದಿ.ಪುನೀತ್ ರಾಜ್‍ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಹ ನೇಹಾ ಪರ ಧ್ವನಿ ಎತ್ತಿದ್ದಾರೆ. ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ತಮ್ಮ ಇನ್ಸ್ಟಾದಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಅಶ್ವಿನಿಯವರು ತಮ್ಮ ಎಕ್ಸ್​ ಖಾತೆಯ, ನೇಹಾ ಹಿರೇಮಠ ಅವರ ಸಾವಿಗೆ ನ್ಯಾಯ ಸಿಗಲಿ ಎಂಬುದು ನಮ್ಮೆಲ್ಲರ ಆಶಯ. ಕಾನೂನಿನ ಅಡಿಯಲ್ಲಿ ಇಂತಹ ಕಹಿ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದು, #JusticeForNeha ಎಂಬ ಟ್ಯಾಗ್ ಬಳಸಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ICC T20 ವಿಶ್ವಕಪ್ ಟೂರ್ನಿಯಲ್ಲಿ ನಂದಿನಿ ಬ್ರಾಂಡ್​?: ಇದು ದೊಡ್ಡ ನಾಚಿಕೆಗೇಡಿನ ಸಂಗತಿ: ಮೋಹನ್​ ಪೈ

ಈ ಬಗ್ಗೆ ಶಿವಣ್ಣ ಸಹ ತಮ್ಮ ಎಕ್ಸ್ ಖಾತೆಯಲ್ಲಿ, ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ-ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಬರೆದುಕೊಂಡಿದ್ದರು.

RELATED ARTICLES

Related Articles

TRENDING ARTICLES