Tuesday, May 7, 2024

ಬಲಿಷ್ಠ RRಗೆ ಮುಂಬೈ ಸವಾಲ್ : ಇಂದಿನ ಪಂದ್ಯದಲ್ಲಿ ಗೆಲ್ಲೋದು ಯಾರು? ಕಾಮೆಂಟ್ ಮಾಡಿ

ಬೆಂಗಳೂರು : ಐಪಿಎಲ್​ನ 38ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್​ ಹಾಗೂ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್​ ಮುಖಾಮುಖಿಯಾಗಲಿವೆ.

ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂ ಈ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ಸಮರ್ಥವಾಗಿರುವ ಸಂಜು ಸ್ಯಾಮ್ಸನ್​ ಪಡೆ ವಿರುದ್ದ ಹಾರ್ದಿಕ್ ಪಾಂಡ್ಯ ಪಡೆ ಗೆಲ್ಲುವುದು ಸುಲಭದ ಮಾತಲ್ಲ.

ರಾಜಸ್ಥಾನ್ ರಾಯಲ್​ ಆಡಿರುವ 7 ಪಂದ್ಯಗಳಲ್ಲಿ 6 ಪಂದ್ಯ ಗೆದ್ದು ಒಂದು ಪಂದ್ಯ ಸೋತಿದೆ. 12 ಅಂಕಗಳೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಮುಂಬೈ ಇಂಡಿಯನ್ಸ್​ ಆಡಿರುವ 7 ಪಂದ್ಯಗಳಲ್ಲಿ 3 ಪಂದ್ಯ ಗೆದ್ದು 4 ಪಂದ್ಯದಲ್ಲಿ ಮುಗ್ಗರಿಸಿದೆ. ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಅಗ್ರಸ್ಥಾನವನ್ನು ಉಳಿಸಿಕೊಳ್ಳಲು ರಾಜಸ್ಥಾನ್ ರಾಯಲ್ಸ್​ ಇಂದು ತೀವ್ರ ಹೋರಾಟ ನಡೆಸಲಿದೆ. ಅದೇ ರೀತಿ ಮುಂಬೈ ಆಟಗಾರರು ಪ್ಲೇಆಫ್​ ಸುತ್ತಿಗೆ ಮುನ್ನಡೆಯಲು ತಮ್ಮ ಸಂಪೂರ್ಣ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿದ್ದಾರೆ. ಆದರೆ, ತವರು ಅಂಗಳದಲ್ಲಿ ರಾಜಸ್ಥಾನ್​ ರಾಜರನ್ನು ಸೋಲಿಸುವುದು ಮುಂಬೈಗೆ ತುಸು ಕಷ್ಟವಾಗಲಿದೆ.

ರಾಜಸ್ಥಾನ್ ರಾಯಲ್ಸ್

ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಆರ್. ಅಶ್ವಿನ್, ಅವೇಶ್ ಖಾನ್, ಟ್ರೆಂಟ್ ಬೌಲ್ಟ್, ಕುಲದೀಪ್ ಸೇನ್, ಯುಜ್ವೇಂದ್ರ ಚಾಹಲ್

ಮುಂಬೈ ಇಂಡಿಯನ್ಸ್

ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೋ ಶೆಫರ್ಡ್, ಜೆರಾಲ್ಡ್ ಕೋಟ್ಜಿ, ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಗೋಪಾಲ್

RELATED ARTICLES

Related Articles

TRENDING ARTICLES