Wednesday, May 8, 2024

ಸೋಮವಾರದ ಒಳಗೆ ರಾಜ್ಯದ ಬರ ಪರಿಹಾರ ಹಣ ಬಿಡುಗಡೆ!

ನವದೆಹಲಿ: ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದರೂ ಬರ ಪರಿಹಾರ ಬಿಡುಗಡೆಯಾಗದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರಿಂಕೋರ್ಟ್​ ಮೊರೆ ಹೋಗಿತ್ತು. ಈ ಪ್ರಕರಣದ ವಿಚಾರಣೆಯು ಇಂದು ನಡೆಯಿತು, ಸೋಮವಾರದ (ಏ.29)ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಹೇಳಿದೆ.

ಸುಪ್ರೀಂಕೋರ್ಟ್​ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು (ಏ.22) ಅರ್ಜಿ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ವಾದ ಮಂಡಿಸಿದರು.

ಇದನ್ನೂ ಓದಿ: ಮಣಿಪುರದ 11 ಮತಗಟ್ಟೆಗಳಲ್ಲಿ ಇಂದು ಮರು ಮತದಾನ

ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು.

ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡ‌ರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್​ 29ಕ್ಕೆ ಮುಂದೂಡಿತು.

RELATED ARTICLES

Related Articles

TRENDING ARTICLES