Saturday, May 4, 2024

ಬಿಜೆಪಿ ಮತ್ತೊಂದು ವಿಕೆಟ್ ಪತನ : ಎಂಎಲ್​ಸಿ ಕೆ.ಪಿ. ನಂಜುಂಡಿ ರಾಜೀನಾಮೆ, ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಲೋಕಸಭೆ ಚುನಾವಣೆ ಸಮಯದಲ್ಲೇ ಬಿಜೆಪಿ ದೊಡ್ಡ ಆಘಾತ ಎದುರಾಗಿದೆ. ವಿಧಾನ ಪರಿಷತ್​ ಸದಸ್ಯ ಕೆ.ಪಿ. ನಂಜುಂಡಿ ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ.

ವಿಧಾನಪರಿಷತ್​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ನಾಳೆ (ಬುಧವಾರ) ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ಕೆ.ಪಿ. ನಂಜುಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಕೆ.ಪಿ. ನಂಜುಂಡಿ ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು.

ನಾಳೆ ಕಾಂಗ್ರೆಸ್ ಪಕ್ಷಕ್ಕೆ​ ಸೇರುತ್ತಿದ್ದೇನೆ

ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ನಾಳೆ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ​ ಸೇರುತ್ತಿದ್ದೇನೆ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಹೇಳಿದ್ದಾರೆ.

ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ

ರಾಜೀನಾಮೆ ಕೊಡುವಂತೆ ಎರಡು ವರ್ಷದಿಂದ ನಮ್ಮ ಸಮಾಜದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ. ಹೀಗಾಗಿ, ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ ಎಂದು ಕೆ.ಪಿ. ನಂಜುಂಡಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES