Saturday, May 4, 2024

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಳ್ಳಾರಿ, ದಾವಣಗೆರೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯೊಳಗಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇಂದು ಹವಾಮಾನ ವರದಿ ತಿಳಿಸಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

5 ದಿನಗಳ ಕಾಲ ಬಿಸಿ ಗಾಳಿ ಬೀಸಲಿದೆ

ಇಂದಿನಿಂದ ಮತ್ತೆ 5 ದಿನ ರಾಜ್ಯದಲ್ಲಿ ಹೀಟ್ ವೇವ್ ಇರಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ರಾಜ್ಯದ 16 ಜಿಲ್ಲೆಗಳಲ್ಲಿ ಉಷ್ಣಾಂಶ 40ರ ಗಡಿ ದಾಟಿದೆ. ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಬೀದರ್‌ಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಯಚೂರಿನಲ್ಲಿ ಬರೋಬ್ಬರಿ 44 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಮುಂದಿನ 5 ದಿನ ಬೆಂಗಳೂರು ಸುತ್ತಮುತ್ತ 37 ಡಿಗ್ರಿ ಸೆ. ಉಷ್ಣಾಂಶವಿರುವ ಸಾಧ್ಯತೆಯಿದೆ.

RELATED ARTICLES

Related Articles

TRENDING ARTICLES