Friday, May 3, 2024

ಹುಬ್ಬಳ್ಳಿಯಲ್ಲಿ ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ

ಹುಬ್ಬಳ್ಳಿ : ಸಿಐಡಿ ಕ್ರೈಂ ಬ್ರ್ಯಾಂಚ್​ನ ಅಧಿಕಾರಿಗಳ ಸೋಗಿನಲ್ಲಿ ಬಂದಿದ್ದ ಮೂವರು ನಕಲಿ ಸಿಐಡಿ ಅಧಿಕಾರಿಗಳನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಹಳೇ ಹುಬ್ಬಳ್ಳಿಯ ಕೃಷ್ಣಾಪೂರ ಓಣಿಯ ನಿವಾಸಿ ಚೇತನ ಹಡಪದ (39), ಲಿಂಗಸೂರನ ಪರಶುರಾಮಗೌಡ ಪಾಟೀಲ್ (45), ಗಂಗಾವತಿಯ ಕಾರಟಗಿಯ ಮಧು ಎಮ್ (35) ಎಂಬುವವರೇ ಬಂಧಿತರು.

ಹುಬ್ಬಳ್ಳಿ ನಗರದಲ್ಲಿ ಈ ಮೂರು ಸಿಐಡಿ ಕ್ರೈಂ ಬ್ರ್ಯಾಂಚ್ ಪೊಲೀಸರು ಎಂದು ಸುಳ್ಳು ಹೇಳಿಕೊಂಡು ಚೈತನ್ಯ ನಗರದ ನಿವಾಸಿ ಯಶೋಧಾ ಮದುಗಲ್ (30) ಎಂಬಾತರಿಗೆ ಮೋಸ ಮಾಡಿದ್ದರು. ಮಹಿಳೆಯಿಂದ ಹೆದರಿಸಿ ಹಣ ಪಡೆದುಕೊಂಡಿದ್ದರು.

ಈ ಬಗ್ಗೆ ಮೋಸ ಹೋದ ಮಹಿಳೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಇನ್ಸ್ಪೆಕ್ಟರ್ ಎಸ್.ಎಚ್. ಯಳ್ಳೂರ ಅವರು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡಿದ್ದರು.

ಆರೋಪಿಗಳಿಂದ ಎರಡು ಮೊಬೈಲ್ ಹಾಗೂ ಒಂದು ಬುಲೆಟ್ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯವನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಶ್ಲಾಘಸಿದ್ದಾರೆ.

RELATED ARTICLES

Related Articles

TRENDING ARTICLES