Monday, May 6, 2024

ಲೋಕಸಭಾ ಚುನಾವಣೆ ಮತದಾನದ ಹಿನ್ನೆಲೆ ಯಾವ ಯಾವ ಕ್ಷೇತ್ರಗಳಿಗೆ ರಜೆ ಘೋಷಣೆ? ಮಾಹಿತಿ ಇಲ್ಲಿದೆ

ಬೆಂಗಳೂರು: ಏಪ್ರಿಲ್​ 26 ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳೂ ಒಳಗೊಂಡಿವೆ. ಮತದಾನದ ದಿನದಂದು ಮತದಾನವನ್ನು ಕಡ್ಡಾಯವಾಗಿ ಮಾಡಬೇಕೆಂಬ ಅಲಿಖಿತ ನಿಯಮ ಇದೆ. ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಂದು ರಜೆ ಇರುತ್ತದೆ.

ಏಪ್ರಿಲ್ 26ರಂದು ಲೋಕಸಭಾ ಚುನಾವಣೆ ನಡೆಯುತ್ತಿದ್ದ ಯಾವ ಯಾವ ಕ್ಷೇತ್ರಗಳಿ ರಜೆ ಘೊಷಣೆಯಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

  • ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 26, ಶುಕ್ರವಾರ ರಜೆ ಇರುತ್ತದೆ.
  • ಬ್ಯಾಂಕುಗಳಿಗೆ ರಜೆ
  • ಶಾಲೆ, ಕಾಲೇಜುಗಳಿಗೆ ರಜೆ
  • ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ

ಇದನ್ನೂ ಓದಿ:  ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಿಸಲು ಹೈಕೋರ್ಟ್​ ಅನುಮತಿ

ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆ ಯಾವೆಲ್ಲ ಕ್ಷೇತ್ರಗಳು ಲಭ್ಯವಿದೆ ಎನ್ನುವ ಮಾಹಿತಿಯೂ ಇಲ್ಲಿದೆ.

  •  ಆಸ್ಪತ್ರೆ, ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ
  • ಬಸ್, ರೈಲು ಇತ್ಯಾದಿ ಸಾರಿಗೆ ವಾಹನಗಳ ಸಂಚಾರ ಇರುತ್ತದೆ
  • ಖಾಸಗಿ ಸಂಸ್ಥೆಗಳು ತೆರೆದಿರುತ್ತವೆ

ಇಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ವೋಟಿಂಗ್ ಮಾಡಲು ಅನುಕೂಲ ಮಾಡಿಕೊಡಬೇಕಾಗುತ್ತದೆ. ಉದ್ಯೋಗಿಗಳು ವೋಟ್ ಹಾಕಿ ಕಚೇರಿ ಹೋಗಬಹುದು. ಮೊದಲ ಪಾಳಿ ಇದ್ದರೆ ಕಚೇರಿ ಕೆಲಸ ಮುಗಿಸಿ ಸಂಜೆ ವೋಟ್ ಹಾಕಬಹುದಾಗಿದೆ.

RELATED ARTICLES

Related Articles

TRENDING ARTICLES