Monday, May 6, 2024

ಡೆಲ್ಲಿಗೆ ಗುಜರಾತ್ ಸವಾಲ್ : ಶುಭ್​ಮನ್ ಗಿಲ್​ಗೆ ಇದು 100ನೇ ಪಂದ್ಯ

ಬೆಂಗಳೂರು : ಐಪಿಎಲ್​ನಲ್ಲಿ ಇಂದು ಮಾಜಿ ಚಾಂಪಿಯನ್ ಗುಜರಾತ್ ಟೈಟಾನ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ನಡುವೆ ಮಹತ್ವದ ಪಂದ್ಯ ನಡೆಯಲಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಐಪಿಎಲ್​ನ 40ನೇ ಪಂದ್ಯಕ್ಕೆ ಸಜ್ಜಾಗಿದೆ. ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಪಂದ್ಯ ಗುಜರಾತ್ ನಾಯಕ ಶುಭ್​ಮನ್ ಗಿಲ್​ಗೆ 100ನೇ ಪಂದ್ಯವಾಗಿದೆ.

ಪ್ರಸಕ್ತ ಆವೃತ್ತಿಯಲ್ಲಿ ಗುಜರಾತ್ ಆಡಿರುವ 8 ಪಂದ್ಯಗಳಲ್ಲಿ 4 ಗೆಲುವು ಹಾಗೂ 4 ಸೋಲು ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್​ 8 ಪಂದ್ಯಗಳಲ್ಲಿ 3 ಗೆಲುವು ಹಾಗೂ 5 ಸೋಲು ಕಂಡಿದೆ. ಗುಜರಾತ್ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್​ 8ನೇ ಸ್ಥಾನದಲ್ಲಿದೆ.

ಐಪಿಎಲ್​ ಇತಿಹಾಸದಲ್ಲಿ ಈವರೆಗೆ ಉಭಯ ತಂಡಗಳು 4 ಬಾರಿ ಮುಖಾಮುಖಿಯಾಗಿವೆ. ಗುಜರಾತ್ 2 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್​ ಸಹ 2 ಪಂದ್ಯ ಗೆದ್ದಿದೆ. ಇಂದಿನ ಪಂದ್ಯ ಡೆಲ್ಲಿ ಪ್ಲೇಆಫ್​ ಅವಕಾಶವನ್ನು ನಿರ್ಧರಿಸಲಿದೆ.

ಗಿಲ್​ಗೆ 100ನೇ ಪಂದ್ಯ

ಶುಭ್​ಮನ್​ ಗಿಲ್​ ಇಂದು ಐಪಿಎಲ್​ನಲ್ಲಿ 100ನೇ ಪಂದ್ಯ ಆಡಲಿದ್ದಾರೆ. ಡೆಲ್ಲಿ ವಿರುದ್ಧದ ಪಂದ್ಯದೊಂದಿಗೆ ಅವರು ಈ ಗೌರವಕ್ಕೆ ಪಾತ್ರರಾಗಲಿದ್ದಾರೆ. ಐಪಿಎಲ್​ನಲ್ಲಿ ಗಿಲ್ ಈವರೆಗೆ 3,000 ರನ್​ ಗಳಿಸಿದ್ದಾರೆ. ಇದರಲ್ಲಿ 3 ಶತಕ ಹಾಗೂ 20 ಅರ್ಧಶತಕ ಸೇರಿವೆ. ಈ ಬಾರಿಯೂ ಗಿಲ್​ ಅಬ್ಬರಿಸುತ್ತಿದ್ದಾರೆ. ಈ ಆವೃತ್ತಿಯಲ್ಲಿ ಗಿಲ್​ 8 ಪಂದ್ಯಗಳನ್ನು ಆಡಿದ್ದು, 298 ರನ್​ ಗಳಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​

ಪೃಥ್ವಿ ಶಾ, ಡೇವಿಡ್ ವಾರ್ನರ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ರಿಷಬ್ ಪಂತ್ (ನಾಯಕ / ವಿ.ಕೀ.), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್

ಗುಜರಾತ್ ಟೈಟಾನ್ಸ್​

ವೃದ್ಧಿಮಾನ್ ಸಹಾ (ವಿ.ಕೀ.), ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ

RELATED ARTICLES

Related Articles

TRENDING ARTICLES