Monday, May 6, 2024

ಟಾಸ್ ಗೆದ್ದ ಗಿಲ್ ಬೌಲಿಂಗ್ ಆಯ್ಕೆ : ಡೆಲ್ಲಿಯಿಂದ ಸ್ಫೋಟಕ ಬ್ಯಾಟರ್ ಔಟ್

ಬೆಂಗಳೂರು : ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಟಾಸ್ ಗೆದ್ದಿರುವ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಐಪಿಎಲ್​ನ 40ನೇ ನಡೆಯುತ್ತಿದೆ. ಉಭಯ ತಂಡಗಳಿಗೂ ಇಂದಿನ ಪಂದ್ಯ ಮಹತ್ವದ್ದಾಗಿದೆ.

ಐಪಿಎಲ್​ ಇತಿಹಾಸದಲ್ಲಿ ಈವರೆಗೆ ಉಭಯ ತಂಡಗಳು 4 ಬಾರಿ ಮುಖಾಮುಖಿಯಾಗಿವೆ. ಗುಜರಾತ್ 2 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್​ ಸಹ 2 ಪಂದ್ಯ ಗೆದ್ದಿದೆ. ಇಂದಿನ ಪಂದ್ಯದ ಫಲಿತಾಂಶ ಡೆಲ್ಲಿ ಕ್ಯಾಪಿಟಲ್ಸ್​ ಪ್ಲೇಆಫ್​ ಅವಕಾಶವನ್ನು ನಿರ್ಧರಿಸಲಿದೆ.

ಗುಜರಾತ್ 8 ಪಂದ್ಯಗಳನ್ನು ಆಡಿದ್ದು 4 ಗೆಲುವು ಹಾಗೂ 4 ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್​ 8 ಪಂದ್ಯಗಳಲ್ಲಿ 3 ಗೆಲುವು ಹಾಗೂ 5 ಸೋಲು ಕಂಡಿದೆ. ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್​

ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (ನಾಯಕ/ವಿ.ಕೀ.), ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್

ಗುಜರಾತ್ ಟೈಟಾನ್ಸ್

ವೃದ್ಧಿಮಾನ್ ಸಹಾ (ವಿ.ಕೀ.), ಶುಭ್​ಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್

RELATED ARTICLES

Related Articles

TRENDING ARTICLES