Monday, May 6, 2024

ಲೋಕಸಭಾ ಚುನಾವಣೆ: ಇಂದು ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು : ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ.

ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. ಈ 14 ಕ್ಷೇತ್ರಗಳಲ್ಲಿ ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಅದಕ್ಕೂ ಮೊದಲೇ ಚುನಾವಣಾ ಪ್ರಚಾರ ಬಿರುಸಾಗಿತ್ತು.

ಇದನ್ನೂ ಓದಿ: ರಾಜ್ಯದಲ್ಲಿ ಇಂದು ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

11 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನೇರ ಹಣಾಹಣಿ ನಡೆಸುತ್ತಿದ್ದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್- ಜೆಡಿಎಸ್‌ ಮಧ್ಯೆ ಸ್ಪರ್ಧೆ ಇದೆ. ಬಿಜೆಪಿ, ಕಾಂಗ್ರೆಸ್‌ನ ಕೇಂದ್ರ, ರಾಜ್ಯಗಳ ಘಟಾನುಘಟಿ ನಾಯಕರು ಹಲವು ಸುತ್ತಿನ ಪ್ರಚಾರ ನಡೆಸಿದ್ದಾರೆ. ಜೆಡಿಎಸ್ ನಾಯಕರೂ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಎಡೆಬಿಡದೆ ಪ್ರಚಾರ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮೈಸೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಬಹಿರಂಗ ಸಭೆಯ ಮೂಲಕ ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಗಳ ಪರ ಮತ ಯಾಚಿಸಿದ್ದಾರೆ. ಮಂಗಳೂರಿನಲ್ಲಿ ರೋಡ್ ಶೋ ನಡೆಸಿ ಕರಾವಳಿಯ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

RELATED ARTICLES

Related Articles

TRENDING ARTICLES