Monday, May 6, 2024

ಹಾಸನದಲ್ಲಿ ಬಿಜೆಪಿ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಪ್ರಚಾರವಿಲ್ಲ : ಮಾಜಿ ಪ್ರಧಾನಿ ದೇವೇಗೌಡ

ಹಾಸನ: ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್​ 26 ರಂದು ಮತದಾನ ನಡೆಯಲಿದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ ಎಂದು ಹೇಳಿಕೆ ಕೊಡುವ ಮೂಲಕ ಮೈತ್ರಿಯಲ್ಲಿ ಒಮ್ಮತವಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ಸಾರುತ್ತಿದ್ದಾರೆ. ಆದಾಗ್ಯೂ, ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ ಎಂದು ನೀವು ಕೇಳಬಹುದು. ನಾವು ಈ ಭಾಗದ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಹಾಸನದಲ್ಲಿ ಬಿಜೆಪಿಯ ಕೆಲವು ವ್ಯಕ್ತಿಗಳು ಸಹಕಾರ ನೀಡದೇ ಇರುವುದು ನಿಜ. ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಹಾಯ ಮಾಡಿಲ್ಲ. ಹಾಗೆಂದು ಅದರಿಂದ ಕುಮಾರಸ್ವಾಮಿಗೆ ಬಹಳ ಅಪಾಯ ಆಗಿಬಿಡುತ್ತದೆ ಎನ್ನೋ ಹಾಗಿಲ್ಲ ಎಂದು ದೇವೇಗೌಡ ಅವರು ಹೇಳಿದರು.

ಇದನ್ನೂ ಓದಿ: ವಿವಿಪ್ಯಾಟ್​ ಮುದ್ರಿತ ಪ್ರತಿ ಪರಿಶೀಲನೆ ಪ್ರಕರಣ : ಇಂದು ಸುಪ್ರಿಂ ತೀರ್ಪು

ಕಳೆದ ಎರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ಹೋರಾಟ ನಡೆದಿದೆ. ಸಂಪತ್ತು ಹಂಚಿಕೆ ಬಗ್ಗೆ ಎರಡು ಪಕ್ಷಗಳ ನಡುವ ದೊಡ್ಡ ಚರ್ಚೆ ನಡೆದಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ವಿಚಾರ ಹೇಳಿದೆ. ಅವರು ಹೇಗಾದರೂ ಸರಿ, ಅಧಿಕಾರಿಕ್ಕೆ ಬರಬೇಕು ಎಂದು ಹೊರಟಿದ್ದಾರೆ. ಸಂಪತ್ತಿನ ಸರ್ವೇ ಹಾಗೂ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಪಾಪ ಎಂದು ದೇವೇಗೌಡ ಲೇವಡಿ ಮಾಡಿದ್ದಾರೆ.

ಮೊದಲ‌ ಹಂತದ ಚುನಾವಣೆಯ ಈ ಭಾಗದಲ್ಲಿ ಬಿಜೆಪಿ ಜೆಡಿಎಸ್ ಸೇರಿ ಪ್ರಚಾರ ಮಾಡುತ್ತಿದ್ದೇವೆ. ಕಾವೇರಿ ಹೋರಾಟ ಜೀವನ್ಮರಣದ ಪ್ರಶ್ನೆ. ಹಾಗಾಗಿಯೇ ನಾವು 28ಕ್ಕೆ 28 ಸ್ಥಾನ‌ ಗೆಲ್ತೇವೆ. ಮೋದಿಯವರು ಡಿಎಂಕೆ ಹಂಗಿನಿಂದ ದೇಶ ಆಳುವ ಪರಿಸ್ಥಿತಿ ಬರುವುದಿಲ್ಲ. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ದೇವೇಗೌಡ ಆಶಯ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES