Monday, May 6, 2024

ವಿವಿಪ್ಯಾಟ್​ ಮುದ್ರಿತ ಪ್ರತಿ ಪರಿಶೀಲನೆ ಪ್ರಕರಣ : ಇಂದು ಸುಪ್ರಿಂ ತೀರ್ಪು

ನವದಹಲಿ: ಚುನಾವಣೆ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರಗಳಲ್ಲಿ ಚಲಾವಣೆಯಾಗುವ ಪ್ರತಿಯೊಂದು ಮತಗಳನ್ನೂ ವಿವಿಪ್ಯಾಟ್‌ನಲ್ಲಿ ದಾಖಲಾಗುವ ಮುದ್ರಿತ ಪ್ರತಿಯೊಂದಿಗೆ ತಾಳೆ ಹಾಕಬೇಕು ಎಂದು ಕೋರಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ ಇಂದು (ಏಪ್ರಿಲ್‌ 24) ತನ್ನ ತೀರ್ಪು ಪ್ರಕಟಿಸಲಿದೆ.

ಮತದಾರ ಇವಿಎಂನಲ್ಲಿ ಮತ ಚಲಾಯಿಸಿದ ಕೂಡಲೇ ಆತ ಯಾವ ಪಕ್ಷಕ್ಕೆ ಮತ ಹಾಕಿದ್ದಾನೆ ಎನ್ನುವ ವಿವರ ಆ ಪಕ್ಷದ ಅಭ್ಯರ್ಥಿಯ ಚಿಹ್ನೆಯೊಂದಿಗೆ ವಿವಿಪ್ಯಾಟ್‌ ಯಂತ್ರದಲ್ಲಿ ಕಾಣಿಸಿಕೊಂಡು ಬಳಿಕ ಮುದ್ರಿತ ರೂಪದಲ್ಲಿ ಒಳ ಸೇರಿಕೊಳ್ಳುತ್ತದೆ. ಆದರೆ ಮತ ಎಣಿಕೆ ವೇಳೆ ಪ್ರತಿ ಕ್ಷೇತ್ರದ ಆಯ್ದ ಬೂತ್‌ಗಳಲ್ಲಿ ಮಾತ್ರವೇ ಚಲಾವಣೆಯಾದ ಮತ ಮತ್ತು ವಿವಿಪ್ಯಾಟ್‌ನಲ್ಲಿ ದಾಖಲಾದ ಮುದ್ರಿತ ಪ್ರತಿಗಳೊಂದಿಗೆ ತಾಳೆ ಹಾಕಲಾಗುತ್ತದೆ. ಆದರೆ ಎಲ್ಲ ಮತಗಳನ್ನೂ ತಾಳೆ ಹಾಕಬೇಕು ಎಂದು ಅರ್ಜಿದಾರರು ಕೋರಿ ಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಸೋಮವಾರದ ಒಳಗೆ ರಾಜ್ಯದ ಬರ ಪರಿಹಾರ ಹಣ ಬಿಡುಗಡೆ!

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠವು ಎರಡು ದಿನಗಳ ವಿಚಾರಣೆಯ ನಂತರ ಏಪ್ರಿಲ್ 18ರಂದು ಅರ್ಜಿಗಳ ಮೇಲಿನ ತೀರ್ಪನ್ನು ಕಾಯ್ದಿರಿಸಿತ್ತು. ವಿಚಾರಣೆ ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಮಣಿಂದರ್ ಸಿಂಗ್, ʼʼಇವಿಎಂಗಳು ಸ್ವತಂತ್ರ ಯಂತ್ರಗಳಾಗಿವೆ ಮತ್ತು ಅವುಗಳನ್ನು ತಿರುಚಲು ಸಾಧ್ಯವಿಲ್ಲ. ಆದರೆ ಮಾನವ ದೋಷದ ಸಾಧ್ಯತೆಯನ್ನು ತಳ್ಳಿ ಹಾಕಲಾಗುವುದಿಲ್ಲʼʼ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

RELATED ARTICLES

Related Articles

TRENDING ARTICLES