Sunday, May 5, 2024

ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿ ಲೀಡ್ ಹೆಚ್ಚಾಗಿದೆ : ಬಿ.ವೈ. ವಿಜಯೇಂದ್ರ

ದಾವಣಗೆರೆ : ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಬಿಟ್ಟು ಬೇರೆ ಯಾರು ಇಲ್ಲ. ಅವರಿಗೆ ಸರಿಸಾಟಿ ಕೂಡ ಯಾರು ಇಲ್ಲ. ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿ ಲೀಡ್ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ವಾತಾವರಣ ಚೆನ್ನಾಗಿ ಇದೆ. ಶಿವಮೊಗ್ಗದಲ್ಲಿ ಕಾರ್ಯಕರ್ತರೆಲ್ಲರೂ ರಣೋತ್ಸಾಹದಲ್ಲಿದ್ದಾರೆ ಎಂದು ತಿಳಿಸಿದರು.

ನಾನು ಬಿ.ವೈ. ರಾಘವೇಂದ್ರ ಅವರು 2 ಲಕ್ಷಗಳ ಮತಗಳ ಅಂತರದಿಂದ ಗೆಲ್ತಾರೆ ಅಂತ ಮಾಡಿದ್ದೆ. ಇದೀಗ ಅವರ ಉತ್ಸಹ ನೋಡಿ, ರಾಘವೇಂದ್ರ ಅವರು 4 ಲಕ್ಷ ಮತಗಳ ಅಂತರದಿಂದ ಗೆದ್ದೇ ಗೆಲ್ತಾರೆ. ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಸೇರಿ ಹಲವು ಕ್ಷೇತ್ರಗಳಲ್ಲಿ ಗೆಲ್ಲಲು ಕಾಂಗ್ರೆಸ್ ಕನಸು ಕಾಣ್ತಾ ಇದೆ. ಆದರೆ, ಎಲ್ಲ ಕಡೆಯೂ ಮೋದಿ, ಬಿಜೆಪಿ ಪರ ವಾತಾವರಣ ಇದೆ. ನಾವು 28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ, ಮೋದಿ ಪರ ವಾತಾವರಣ ಇದೆ

ಆಡಳಿತ ಕಾಂಗ್ರೆಸ್ ಪಕ್ಷದವರು ಹೇಗಾದ್ರೂ ಮತದಾರರ ಮನಸ್ಸು ಗೆಲ್ಲಬೇಕು ಅಂತ ಪ್ರಯತ್ನ ಮಾಡ್ತಾ ಇದ್ದಾರೆ. ಕಾಂಗ್ರೆಸ್ ಎಷ್ಟೇ ಪ್ರಯತ್ನಪಟ್ಟರು ವಾತಾವರಣ ಬಿಜೆಪಿ ಹಾಗೂ ಜೆಡಿಎಸ್ ಪರ ಇದೆ. ಮತದಾರರು ನರೇಂದ್ರ ಮೋದಿ ಪರ ಇರಬೇಕು ಅಂತ ಗಟ್ಟಿಯಾದ ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ನಮ್ಮ ನಿರೀಕ್ಷೆ ಮೀರಿ ಬಿಜೆಪಿ ಪರ ವಾತಾವರಣ ಇದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ತೇವೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.

ನೂರಕ್ಕೆ ನೂರರಷ್ಟು ಬಿಜೆಪಿ ಗೆದ್ದೇ ಗೆಲ್ಲುತ್ತೆ

ದಾವಣಗೆರೆ ಲೊಕಸಭಾ ಕ್ಷೇತ್ರದಲ್ಲಿ ಬೂತ್ ಅಧ್ಯಕ್ಷರ ಸಭೆ, ಹರಿಹರ ರೋಡ್ ಶೋ ಏರ್ಪಾಡು ಮಾಡಿದ್ದಾರೆ. ದಾವಣಗೆರೆಯಲ್ಲಿ ಚುನಾವಣೆ ಘೋಷಣೆ ಮುನ್ನ ಬಹಳ ಗೊಂದಲ ಇತ್ತು. ಇದೀಗ ಅದೆಲ್ಲವು ಮರೆತು ಒಗ್ಗಟ್ಟಾಗಿ ಕೆಲಸ ಮಾಡ್ತಾ ಇದ್ದಾರೆ. ದಾವಣಗೆರೆಯಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಇದೇ ತಿಂಗಳು 28ಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

RELATED ARTICLES

Related Articles

TRENDING ARTICLES