Sunday, May 5, 2024

‘ಪೆನ್​ಡ್ರೈವ್’ ಸ್ವಾಮಿ ಗ್ಯಾರಂಟಿ ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ : ಡಿ.ಕೆ. ಶಿವಕುಮಾರ್

ಬೆಂಗಳೂರು : ‘ಪೆನ್‌ಡ್ರೈವ್‌’ ಸ್ವಾಮಿ ಅವರು ನಮ್ಮ ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್‌ ಗ್ಯಾರಂಟಿಗಳ ಮುಂದೆ ಬಿಜೆಪಿ ಗ್ಯಾರಂಟಿಗಳು ಲೊಳಲೊಟ್ಟೆ ಎಂಬುದು ಎಲ್ಲರಿಗೂ ಮನದಟ್ಟಾಗಿದೆ. ಇದರಿಂದ ಹತಾಶರಾಗಿರುವ ಕುಮಾರಸ್ವಾಮಿ ಗ್ಯಾರಂಟಿ ತಡೆಯುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಕನ್ನಡಿಗರ ಮೇಲೆ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ಕತ್ತಿ ಮಸೆಯುತ್ತಿವೆ. ರಾಜ್ಯದ ಜನರ ಮೇಲೆ ಅದ್ಯಾಕೆ ಈ ಪರಿ ದ್ವೇಷವೋ ಗೊತ್ತಿಲ್ಲ. ಈಗಾಗಲೇ ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎನ್ನುವ ಮೂಲಕ ಅವರ ಕೀಳು ಮನಸ್ಥಿತಿಯನ್ನು ಬಹಿರಂಗಪಡಿಸಿದ್ದಾರೆ ಎಂದು ಚಾಟಿ ಬೀಸಿದ್ದಾರೆ.

ರಾಜಕೀಯಕ್ಕಿಂತ ಜನರ ಕ್ಷೇಮವೇ ಮುಖ್ಯ

ಎಸ್ಸಿ, ಎಸ್ಟಿ, ಒಬಿಸಿ, ರೈತರು, ಯುವಕರು, ಮಹಿಳೆಯರು, ಬಡವರು ಗ್ಯಾರಂಟಿಗಳನ್ನು ಪಡೆಯುವ ಮೂಲಕ ಕರ್ನಾಟಕ ಸರ್ಕಾರದ ಪಾಲುದಾರರಾಗಿದ್ದಾರೆ. ರಾಜಕೀಯಕ್ಕಿಂತ ಜನರ ಕ್ಷೇಮವೇ ಮುಖ್ಯ ಎನ್ನುವ ಸಿದ್ಧಾಂತ ನಮ್ಮದು. ಎಲ್ಲದರಲ್ಲೂ ಕ್ಷುಲ್ಲಕ ರಾಜಕೀಯ ಮಾಡುವ ಮನಸ್ಥಿತಿ ಕುಮಾರಸ್ವಾಮಿ ಅವರದು ಎಂದು ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

RELATED ARTICLES

Related Articles

TRENDING ARTICLES