Saturday, May 4, 2024

ರಾಜ್ಯದಲ್ಲಿ ಏ.26 ರಂದು ಮೊದಲ ಹಂತದ ಚುನಾವಣೆ: ಪ್ರವಾಸಿ ತಾಣಗಳು ಬಂದ್

ಬೆಂಗಳೂರು : ಏ.26 (ನಾಳೆ) ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ಇಂದಿನಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಾಳೆ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ. ಮತ ಏಣಿಕೆಯ ಹಿನ್ನೆಲೆ ಜೂನ್ 4ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ. ನಗರ ಜಿಲ್ಲಾ ವ್ಯಾಪ್ತಿಯಲ್ಲಿ 5 ಜನಕ್ಕಿಂತ ಹೆಚ್ಚು ಜನ ಸೇರುವುದು, ಸಭೆ, ಸಮಾರಂಭ ನಡೆಸದಂತೆ ನಿಷೇಧಿಸಲಾಗಿದೆ.

ಮತಗಟ್ಟೆಯ 100 ಮೀಟರ್ ಅಂತರದಲ್ಲಿ ಜೆರಾಕ್ಸ್, ಸೈಬರ್ ಕೆಫೆ, ಬುಕ್ ಸ್ಟಾಲ್ ಗಳ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ. ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಧ್ವನಿವರ್ಧಕ ಬಳಕೆ ನಿಷೇಧ ಮಾಡಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಮತದಾನದ ಹಿನ್ನೆಲೆ ಯಾವ ಯಾವ ಕ್ಷೇತ್ರಗಳಿಗೆ ರಜೆ ಘೋಷಣೆ? ಮಾಹಿತಿ ಇಲ್ಲಿದೆ

ಪ್ರವಾಸಿ ತಾಣಗಳು ಬಂದ್:

ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಮುಚ್ಚಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮೈಸೂರು ಮೃಗಾಲಯ ಎಂದೇ ಜನಪ್ರಿಯವಾಗಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿ ಕೆರೆಯನ್ನು ನಾಳೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES