Saturday, May 4, 2024

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತ!

ಚಾಮರಾಜನಗರ: ಕಾರಿನ ಟೈಯರ್​ ಸ್ಪೋಟಗೊಂಡು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತವಾಗಿರುವ ಘಟನೆ ನಡೆದಿದೆ.

ಬುಧವಾರ ತಡರಾತ್ರಿ 11.50ರ ಸುಮಾರಿಗೆ ಮೈಸೂರಿನ ನಾಡನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿದ್ದಾಗ ಕಾರಿನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಶಾಸಕ  ಕೃಷ್ಣಮೂರ್ತಿ, ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್‌ ಹಾಗೂ ವಾಹನದ ಚಾಲಕ ಸತೀಶ್ ಇದ್ದರು ಎನ್ನಲಾಗಿದೆ. ಸದ್ಯ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಏ.26 ನಾಳೆ 13 ರಾಜ್ಯಗಳ 88 ಕ್ಷೇತ್ರಗಳಿಗೆ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ ಚಾಮರಾಜನಗರ ಲೋಕಸಭಾ ಚುನಾವೆ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್​ ಪರ ಶಾಸಕ ಎ.ಆರ್ ಕೃಷ್ಣಮೂರ್ತಿ ಅವರು ಪ್ರಚಾರದಲ್ಲಿ ತೊಡಗಿದ್ದರು ಎನ್ನಲಾಗಿದೆ.

RELATED ARTICLES

Related Articles

TRENDING ARTICLES