Saturday, May 4, 2024

ಅಮಿತಾಬ್ ಬಚ್ಚನ್​, ಎಆರ್​ ರೆಹಮಾನ್​ ಗೆ ಲತಾ ಮಂಗೇಶ್ಕರ್ ಪ್ರಶಸ್ತಿ ಪ್ರಧಾನ

ಮುಂಬೈ: ಏಪ್ರಿಲ್ 24ರಂದು ಮುಂಬೈನ ವಿಲೇ ಪಾರ್ಲೆ ಪ್ರದೇಶದಲ್ಲಿ ಬಾಲಿವುಡ್‌ ನಟ ಅಮಿತಾಭ್ ಬಚ್ಚನ್ ಮತ್ತು ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರಿಗೆ ʻಲತಾ ದೀನನಾಥ್ ಮಂಗೇಶ್ಕರ್ʼ ಪುರಸ್ಕಾರ ನೀಡಿ ಗೌರವಿಸಲಾಯಿತು.

ಮುಂಬೈನಲ್ಲಿ ಮಂಗೇಶ್ಕರ್ ಕುಟುಂಬದ ಸದಸ್ಯರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್​ ಚಿತ್ರರಂಗಕ್ಕೆ ಬಿಗ್​ ಬಿ ಅಮಿತಾಬ್ ನೀಡಿದ ಕೊಡುಗೆಗೆ ಗಾಯಕಿ ಉಷಾ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನ ಮಾಡಬೇಕಿದ್ದ ಆಶಾ ಭೋಂಸ್ಲೆ ಅವರು ಅಸ್ವಸ್ಥರಾಗಿರುವ ಕಾರಣ ಪ್ರಶಸ್ತಿಯನ್ನು ನೀಡಲಾಗಲಿಲ್ಲ.

ಮೂರು ವರ್ಷಗಳಿಂದ ಲತಾ ಮಂಗೇಶ್ಕರ್​ ಕುಟುಂಬ ಈ ಪ್ರಶಸ್ತಿಯನ್ನು ದಿಗ್ಗಜರಿಗೆ ನೀಡಿ ಗೌರವಿಸಿಕೊಂಡು ಬರುತ್ತಿದೆ. ಭಾರತೀಯ ಸಿನಿಮಾ, ಸಂಸ್ಕೃತಿ ಮತ್ತು ಸಮಾಜದ ಮೇಲೆ ಅಮಿತಾಭ್​ ಬಚ್ಚನ್ ಅವರು ಬೀರಿದ ಪ್ರಭಾವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ಈ ಮುಂಚೆ ಮಾಹಿತಿ ಹಂಚಿಕೊಂಡಿದ್ದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಏ.26 ನಾಳೆ 13 ರಾಜ್ಯಗಳ 88 ಕ್ಷೇತ್ರಗಳಿಗೆ ಮತದಾನ

ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ಹಿರಿಯ ಮರಾಠಿ ಸಿನಿಮಾ ಕಲಾವಿದ ಅಶೋಕ್ ಸರಾಫ್, ಮರಾಠಿ ನಟಿ ಪದ್ಮಿನಿ ಕೊಲ್ಹಾಪುರೆ, ಗಾಯಕ ರೂಪ್‌ಕುಮಾರ್ ರಾಥೋಡ್, ಮರಾಠಿ ರಂಗಭೂಮಿಯ ದಿಗ್ಗಜ ಅತುಲ್ ಪರ್ಚುರೆ ಹಾಗೂ ಖ್ಯಾತ ಲೇಖಕಿ ಮಂಜಿರಿ ಫಡ್ಕೆ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಇದೆ ವೇಳೆ ನಟ, ನಿರ್ದೇಶಕ, ನಿರ್ಮಾಪಕ ರಣದೀಪ್ ಹೂಡಾ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ವಿಶೇಷ ಪ್ರಶಸ್ತಿಯನ್ನು ಸ್ವೀಕರಿಸಿದರು.
ಬಹು ಅಂಗಾಂಗ ವೈಫಲ್ಯದಿಂದ 2022ರ ಫೆಬ್ರವರಿ 6ರಂದು ನಿಧನರಾದ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥವಾಗಿ ಮಂಗೇಶ್ಕರ್ ಕುಟುಂಬ ಮತ್ತು ಟ್ರಸ್ಟ್ ಈ ಪ್ರಶಸ್ತಿಯನ್ನು ನೀಡುತ್ತ ಬರುತ್ತಿದೆ.

RELATED ARTICLES

Related Articles

TRENDING ARTICLES