Saturday, May 4, 2024

ನೇಹಾ ಕೊಲೆ ಪ್ರಕರಣ:ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು: ಸಿಎಂ

ಬೀದರ್: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ಒತ್ತಾಯ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐ ವಹಿಸಿದೆಯೇ? ಎಂದು ಪ್ರಶ್ನಿಸಿದರು. ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐ ಗೆ ವಹಿಸಿದ್ದೇನೆ. ಅವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ. ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ., ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.

ಇದನ್ನೂ ಓದಿ: ಅಮೇಠಿ, ರಾಯ್ ಬರೇಲಿಯಿಂದ ರಾಹುಲ್, ಪ್ರಿಯಾಂಕಾ ಸ್ಪರ್ಧೆ?

ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ:

ನೇಹಾ ತಂದೆಯವರು ತಮ್ಮ ಮಗಳ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವೇ ರಾಜಕೀಯ ಮಾಡುತ್ತಿದೆ ಹಾಗೂ ಬಿಜೆಪಿಯವರ ಇದೇ ಧೋರಣೆಯನ್ನು ಹೊಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ಇತರೆ ಪಕ್ಷಗಳು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.

RELATED ARTICLES

Related Articles

TRENDING ARTICLES