Saturday, May 4, 2024

ಅಮೇಠಿ, ರಾಯ್ ಬರೇಲಿಯಿಂದ ರಾಹುಲ್, ಪ್ರಿಯಾಂಕಾ ಸ್ಪರ್ಧೆ?

ದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಠಿ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್ 26ರ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಮುಂದಿನ ವಾರ ಇಬ್ಬರೂ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ರಾಹುಲ್ ಗಾಂಧಿ ಈಗಾಗಲೇ ಕೇರಳದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಅಲ್ಲಿ ನಾಳೆ ಮತದಾನ ನಡೆಯಲಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಏ.26 ನಾಳೆ 13 ರಾಜ್ಯಗಳ 88 ಕ್ಷೇತ್ರಗಳಿಗೆ ಮತದಾನ

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿಯನ್ನು ಸ್ಮೃತಿ ಇರಾನಿ ಮಣಿಸಿದ್ದರು. ಈ ಬಾರಿಯೂ ಸ್ಮೃತಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಾಡಿಕೊಳ್ಳಲಾಗಿರುವ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಮತ್ತು ಸಮಾಜವಾದಿ ಪಕ್ಷ ಉಳಿದ 63 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.

ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆ ರಾಯ್ ಬರೇಲಿ ಮತ್ತು ಅಮೇಠಿ ಜೊತೆಗೆ ವಾರಾಣಸಿ, ಗಾಜಿಯಾಬಾದ್ ಮತ್ತು ಕಾನ್ಸುರದಲ್ಲೂ ಕಾಂಗ್ರೆಸ್ ಸ್ಪರ್ಧಿಸುತ್ತಿದೆ.

RELATED ARTICLES

Related Articles

TRENDING ARTICLES