Sunday, May 5, 2024

ಟಾಸ್ ಗೆದ್ದ RCB ಬ್ಯಾಟಿಂಗ್ ಆಯ್ಕೆ : ಇಂದಿನ ಪಂದ್ಯದಲ್ಲೂ ಗ್ಲೆನ್ ಮ್ಯಾಕ್ಸ್​ವೆಲ್ ಅಲಭ್ಯ

ಬೆಂಗಳೂರು : ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ​ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಮೈದಾನದಲ್ಲಿ ಐಪಿಎಲ್​ನ 41ನೇ ಪಂದ್ಯ ನಡೆಯುತ್ತಿದೆ. ಹೈದರಾಬಾದ್​ ಅಂಗಳದಲ್ಲಿ ರನ್​ ಮಳೆ ಹರಿಯುವ ಸಾಧ್ಯತೆಯಿದೆ. ಇದು RCBಗೆ 250ನೇ ಐಪಿಎಲ್​ ಪಂದ್ಯವಾಗಿದೆ.

ಟೂರ್ನಿಯ ಮೊದಲ ಮುಖಾಮುಖಿಯಲ್ಲಿ ಹೈದರಾಬಾದ್​ ಅಬ್ಬರಕ್ಕೆ ಮಣಿದ ಆರ್​ಸಿಬಿ, ಇದೀಗ ಮತ್ತೊಮ್ಮೆ ಅದೇ ತಂಡದ ವಿರುದ್ಧ ಸೆಣಸುತ್ತಿದೆ. ಆರ್​ಸಿಬಿ 8 ಪಂದ್ಯ ಆಡಿದ್ದು 7 ಪಂದ್ಯಗಳಲ್ಲಿ ಸೋಲು ಕಂಡಿದೆ. ಒಂದು ಪಂದ್ಯ ಮಾತ್ರ ಗೆದ್ದಿದೆ. ಹೀಗಾಗಿ, ಆರ್​ಸಿಬಿ ಪ್ಲೇಆಫ್​ ರೇಸ್​ನಿಂದ ಬಹುತೇಕ ಹೊರಬಿದ್ದಿದೆ. ಸನ್‌ರೈಸರ್ಸ್ ಹೈದರಾಬಾದ್ ಆಡಿರುವ 7 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದೆ. 2 ಪಂದ್ಯ ಸೋತು, ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿ.ಕೀ.), ಮಹಿಪಾಲ್ ಲೊಮ್ರೋರ್, ಕರಣ್ ಶರ್ಮಾ, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್

ಸನ್‌ರೈಸರ್ಸ್ ಹೈದರಾಬಾದ್

ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿ.ಕೀ.), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ಟಿ. ನಟರಾಜನ್

RELATED ARTICLES

Related Articles

TRENDING ARTICLES