Saturday, May 4, 2024

ಲೋಕಸಭಾ ಚುನಾವಣಾ ಕಾರ್ಯಕ್ಕೆ ಸಿಬ್ಬಂದಿಗಳ ನೇಮಕ

ಬೆಂಗಳೂರು: ನಾಳೆ ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಕಾರ್ಯಕ್ಕೆ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗಿದೆ.

ಇಂದು ಬೆಂಗಳೂರಿನ ಮಲ್ಲೇಶ್ವರಂ ಮಸ್ಟರಿಂಗ್ ಸೆಂಟರ್‌ನಲ್ಲಿ ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ ಮಾಡುಲಾಗುತ್ತಿದೆ. ಶಿಕ್ಷಕರು, ಉಪನ್ಯಾಸಕರು, ವಿವಿಧ ಇಲಾಖೆಗಳ ಸರ್ಕಾರಿ ನೌಕರರನ್ನ ಕರ್ತವ್ಯಕ್ಕೆ ನೇಮಕ ಮಾಡಲಾಗಿದೆ. ಜೊತೆಗೆ ಚುನಾವಣಾ ಆಯೋಗ ಪೊಲೀಸರನ್ನೂ ನಿಯೋಜನೆ ಮಾಡಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಏ.26 ನಾಳೆ 13 ರಾಜ್ಯಗಳ 88 ಕ್ಷೇತ್ರಗಳಿಗೆ ಮತದಾನ

ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ಬ್ಯಾಲೆಟ್ ಓಟ್ ಮಾಡಲು ಅವಕಾಶ ನೀಡಲಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳುವ ಮುನ್ನ ಬ್ಯಾಲೆಟ್ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಬಳಿಕ ಇವಿಎಂ ಮೆಶಿನ್ ಬಗ್ಗೆ ರಿಟರ್ನಿಂಗ್ ಆಫಿಸರ್‌ಗಳು ಮಾಹಿತಿ ನೀಡಿದ್ದಾರೆ.

ಇವಿಎಂ, ವಿವಿ ಪ್ಯಾಟ್, ಬ್ಯಾಲೆಟ್ ಬಾಕ್ಸ್ ಕೊಂಡೊಯ್ಯಲು ಮೂವರು ಸಿಬ್ಬಂದಿಗಳ ನೇಮಕ ಮಾಡಲಾಗಿದೆ. ಮೂವರು ಸಿಬ್ಬಂದಿಗಳ ಜೊತೆ ಒಬ್ಬ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಿದ್ದಾರೆ. ಮತಗಟ್ಟೆಗಳಿಗೆ ತೆರಳಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.  BMTC, KSRTC ಮತ್ತು ಶಾಲಾ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES