Sunday, May 5, 2024

RCBಗೆ ಬಲಿಷ್ಠ ಹೈದರಾಬಾದ್ ಸವಾಲ್ : 250ನೇ ಪಂದ್ಯದಲ್ಲಿ RCB ಗೆಲ್ಲುತ್ತಾ? ಕಾಮೆಂಟ್ ಮಾಡಿ

ಬೆಂಗಳೂರು : ಐಪಿಎಲ್​ನ 41ನೇ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು​ ತಂಡ ಮುಖಾಮುಖಿಯಾಗಲಿವೆ.

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಮೈದಾನ ಈ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಮೊದಲ ಮುಖಾಮುಖಿಯಲ್ಲಿ ಸನ್​ರೈಸರ್ಸ್ ಅಬ್ಬರಕ್ಕೆ ಬರ್ನ್ ಆಗಿದ್ದ ಆರ್​ಸಿಬಿ, ಇಂದು ಮತ್ತೊಮ್ಮೆ ಅದೇ ತಂಡವನ್ನು ಎದುರಿಸಲಿದೆ.

ಇದು RCBಗೆ 250ನೇ ಐಪಿಎಲ್​ ಪಂದ್ಯವಾಗಿದೆ. ಹೈದರಾಬಾದ್​ ಅಂಗಳದಲ್ಲಿ ರನ್​ ಮಳೆ ಹರಿಯುವ ಸಾಧ್ಯತೆಯಿದೆ. ಪ್ರಸಕ್ತ ಟೂರ್ನಿಯಲ್ಲಿ ಆರ್​ಸಿಬಿ ಆಡಿರುವ 8 ಪಂದ್ಯಗಳಲ್ಲಿ ಬರೋಬ್ಬರಿ 7 ಪಂದ್ಯಗಳಲ್ಲಿ ಮುಖಭಂಗ ಅನುಭವಿಸಿದೆ. ಕೇವಲ ಒಂದು ಪಂದ್ಯದಲ್ಲಿ ಗೆದ್ದಿದೆ. ಆರ್​ಸಿಬಿ ಪ್ಲೇಆಫ್​ ರೇಸ್​ನಿಂದ ಬಹುತೇಕ ಹೊರಬಿದ್ದಿದೆ.

ಇನ್ನೂ ಸನ್‌ರೈಸರ್ಸ್ ಹೈದರಾಬಾದ್ ಆಡಿರುವ 7 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದ್ದು, 2 ಪಂದ್ಯ ಸೋತಿದೆ. ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಹೈದರಾಬಾದ್​ ಗೆದ್ದರೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಲಗ್ಗೆ ಇಡಲಿದೆ.

ಸನ್‌ರೈಸರ್ಸ್ ಹೈದರಾಬಾದ್

ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿ.ಕೀ.), ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ. ನಟರಾಜನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಗ್ಲೇನ್​ ಮ್ಯಾಕ್ಸ್​ವೆಲ್/ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿ.ಕೀ.), ಕರಣ್​ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಸಿರಾಜ್

RELATED ARTICLES

Related Articles

TRENDING ARTICLES