Tuesday, May 7, 2024

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕಿ ಹೃದಯಾಘಾತದಿಂದ ಸಾವು

ತುಮಕೂರು : ಲೋಕಸಭಾ ಚುನಾವಣೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.

ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ಮೇಗಳಗೊಲ್ಲರಹಟ್ಟಿ ಮತಗಟ್ಟೆ ಸಂಖ್ಯೆ 202ರಲ್ಲಿ ಸಹಾಯಕ ಮತಗಟ್ಟೆ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಯಶೋಧ (58) ವರ್ಷ ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕಿ ಯಶೋಧರ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: ರಣಹೇಡಿ ಎಂದ ವ್ಯಕ್ತಿ ರಾತ್ರೋರಾತ್ರಿ ಕದ್ದುಮುಚ್ಚಿ ಗಿಫ್ಟ್ ಕೂಪನ್, ಹಣ, ದೇವರ ಲಾಡು ಹಂಚುತ್ತಿದ್ದಾರೆ!:HDK

ಮುಂಜಾನೆ ಮತದಾನ ಆರಂಭದ ವೇಳೆನಯಲ್ಲಿ ಯಶೋಧಮ್ಮನವರಿಗೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿದೆ. ಸ್ಥಳಕ್ಕೆ ಆಗಮಿಸಿದ ಸೆಕ್ಟರ್ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ವಾಹನದಲ್ಲಿ ಆಸ್ಪತ್ರೆ ಕರೆದೊಯ್ದಿದ್ದಾರೆ. ಆಸ್ಪತ್ರೆ ತಲುಪುವ ವೇಳೆಗಾಗಲೇ ತೀವ್ರ ಹೃದಯಾಘಾತಕ್ಕೆ ತುತ್ತಾದ್ದರಿಂದ ಯಶೋಧಮ್ಮ ಮೃತಪಟ್ಟಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಆನಂದ.ಬಿ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES