Tuesday, May 7, 2024

ಮತದಾನಕ್ಕೆ ಬಂದಿದ್ದ ಮಹಿಳೆಗೆ ಹೃದಯ ಸ್ಥಂಭನ: ನೆರವಿಗೆ ದಾವಿಸಿದ ವೈದ್ಯ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ  ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ ಆಗಿದ್ದು ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಬೆಂಗಳೂರಿನ ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಇಂದು ಬಂದಿದ್ದರು ಈ ವೇಳೆ ಅಕೆಗೆ ಆಯಾಸವಾಗಿ ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಈ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ಇದನ್ನೂ ಓದಿ: ಲೊಕಸಭಾ ಚುನಾವಣೆ : ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

RELATED ARTICLES

Related Articles

TRENDING ARTICLES