Monday, May 6, 2024

ದೇವೇಗೌಡರಿಗೆ ಮಾಹಿತಿ ಕೊರತೆ ಇದೆ: ಕ್ಷೇತ್ರ ತ್ಯಾಗ ಮಾಡಿದ್ದು ತಪ್ಪಾ?- ಸಂಸದೆ ಸುಮಲತಾ

ಮಂಡ್ಯ: ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಾನು ಗೆದ್ದಂತಹ ಕ್ಷೇತ್ರ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಎನ್​​ಡಿಎಗೆ ಕೊಟ್ಟಿದ್ದೇವೆ. ಸ್ವತಂತ್ರ ಸಂಸದೆಯಾಗಿ ನನ್ನ‌ ಜವಾಬ್ದಾರಿ ನಿರ್ವಹಿಸಿದ್ದೀನಿ. ನಾವು ನಿಷ್ಠೆಯಿಂದ ಕೆಲಸ ಮಾಡಿದ್ದೇವೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ರಾಜ್ಯದಲ್ಲಿ ಇಂದು ಮೊದಲನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ಮಾತನಾಡಿದರು.

ಇದನ್ನೂ ಓದಿ: ಮತದಾನಕ್ಕೆ ಬಂದಿದ್ದ ಮಹಿಳೆಗೆ ಹೃದಯ ಸ್ಥಂಭನ: ನೆರವಿಗೆ ದಾವಿಸಿದ ವೈದ್ಯ

ಸುಮಲತಾ ಅಂಬರೀಶ್, ಚುನಾವಣೆಯಲ್ಲಿ ಸಹಕರಿಸಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ದೇವೆಗೌಡರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಕೊರತೆ ಇರಬಹುದು ಅದಕ್ಕೆ ಈ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.

ಈ‌ ದಿನದವರೆಗೂ ಜೆಡಿಎಸ್​ನ ಯಾವ ನಾಯಕರು ಯಾವುದೇ ಸಭೆಗೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತದೆ. ಆದರೆ ಅವರು ನನ್ನ‌ ಕರೆದಿಲ್ಲ, ನಾನಿಲ್ಲದೇ ಅವರು ಚುನಾವಣೆ ಮಾಡಿಕೊಳ್ಳುತ್ತೀವಿ ಎಂಬ ಭಾವನೆ ಇರಬಹುದು ಎಂದು ದಳಪತಿಗಳಿಗೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟರು.

RELATED ARTICLES

Related Articles

TRENDING ARTICLES