Monday, May 6, 2024

ಬಿಜೆಪಿ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಹೊಡೆದಾಟ

ಆನೇಕಲ್: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸರ್ಜಾಪುರದ ಮತಗಟ್ಟೆ79, 80, 81ಹಾಗೂ 82ರ ವ್ಯಾಪ್ತಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಬಿಜೆಪಿ ಕಾರ್ಯಕರ್ತರು ಮತಗಟ್ಟೆ ದಾರಿಯಲ್ಲಿ ಟೇಬಲ್ ಹಾಕಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಟೇಬಲ್ ಕಿತ್ತೆಸೆದು ದಾಂಧಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕಿ ಹೃದಯಾಘಾತದಿಂದ ಸಾವು

ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರೌಡಿ ಶೀಟರ್ ಹಾಗೂ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಎಂಬಾತ ಪ್ರಕಾಶ್‌ರ ಎದೆಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾನೆ.

ಪ್ರಕಾಶ್ ಕಳೆದ ಮೂರು ತಿಂಗಳ ಹಿಂದಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಕಟ್ಟಿಂಗ್ ಸೀನ ತನ್ನ ಸಹಚರರೊಂದಿಗೆ ಬಂದು ಪ್ರಕಾಶರ ಎದೆಗೆ ಕಾಲಿನಿಂದ ಒದ್ದಿದ್ದಾರೆ. ತೀವ್ರ ಅಸ್ವಸ್ಥರಾಗಿರುವ ಪ್ರಕಾಶ್ ಅವರನ್ನು ವಂದನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

RELATED ARTICLES

Related Articles

TRENDING ARTICLES