Monday, May 6, 2024

ಲೋಕಸಭಾ ಚುನಾವಣೆ: ಸರತಿ ಸಾಲಿನಲ್ಲಿ ನಿಂತು ಡಾ.ರಾಜ್​ ಕುಟುಂಬದಿಂದ ಮತದಾನ

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಇಂದು ಏ.26 ಚುನಾವಣೆ ನಡೆಯುತ್ತಿದ್ದು ಬೆಂಗಳೂರಿನಲ್ಲಿ ಡಾ.ರಾಜ್​ಕುಮಾರ್​ ಕುಟುಂಬ  ಮತದಾನ ಕೇಂದ್ರಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಅಣ್ಣಾವ್ರ ಪುತ್ರ ರಾಘವೇಂದ್ರ ರಾಜ್ ಕುಮಾರ್, ಅವರ ಪತ್ನಿ ಮಂಗಳ ರಾಘವೇಂದ್ರ ರಾಜ್ ಕುಮಾರ್ ಮತ್ತು ಮಕ್ಕಳಾದ ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಒಟ್ಟಾಗಿ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ : ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾನ

ಮತದಾನದ ನಂತರ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ‘ಇದು ಮತದಾನ ಅಲ್ಲ, ಮತವನ್ನು ದಾನ ಮಾಡಬೇಡಿ. ಅದು ನಮ್ಮ ಹಕ್ಕು, ಹಕ್ಕನ್ನು ಎಲ್ಲರೂ ಚಲಾಯಿಸಿ ಎಂದರು. ಈ ಹಿಂದೆ ಅಪ್ಪ ಅಮ್ಮನ ಜೊತೆ ಬಂದು ವೋಟು ಮಾಡುತ್ತಿದ್ದೆವು. ಆಮೇಲೆ ಅಪ್ಪು ಜೊತೆ ಬಂದೆ. ಈಗ ಒಬ್ಬೊಬ್ಬರೆ ಹೋಗುತ್ತಿದ್ದಾರೆ. ಮುಂದಿನ ಪೀಳಿಗೆ ಮತದಾನಕ್ಕೆ ಸಜ್ಜಾಗುತ್ತಿದೆ ಎಂದರು.

RELATED ARTICLES

Related Articles

TRENDING ARTICLES