Tuesday, May 7, 2024

ಗ್ರಾಮಸ್ಥರಿಂದ ಮತಗಟ್ಟೆ ಧ್ವಂಸ: ಪೊಲೀಸರ ಮೇಲೆ ಕಲ್ಲು ತೂರಿದ ಜನ

ಚಾಮರಾಜನಗರ: ಐದು ಗ್ರಾಮಗಳ ಮತದಾರರು ಮತದಾನ ಬಹಿಷ್ಕರಿಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏ.26) ಮೊದಲ ಹಂತದ ಮತದಾನ ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ.

ಇದನ್ನೂ ಓದಿ: ಬಿಜೆಪಿ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಹೊಡೆದಾಟ

ಮಹದೇಶ್ವರ ಬೆಟ್ಟ ವ್ಯಾಪ್ತಿಯ ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸಿಕೆರೆ ಗ್ರಾಮಗಳಲ್ಲಿ  ಮೂಲಸೌಕರ್ಯ ಕಲ್ಪಿಸುವಂತೆ ಎಷ್ಟೋ ಬಾರಿ ಮನವಿ ಮಾಡಿಕೊಂಡರು ಮೂಲ ಸೌಕರ್ಯವನ್ನು ಕಲ್ಪಿಸಿರಲಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಅದಾದ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದಾರೆ.

ಇನ್ನು ಇಂಡಿಗನತ್ತ ಗ್ರಾಮದಲ್ಲಿ ಮತದಾನದಿಂದ ದೂರ ಉಳಿದ ಗ್ರಾಮಸ್ಥ ಮತಗಟ್ಟೆಯಲ್ಲಿದ್ದ ಇವಿಎಂ, ಮೇಜು ಕುರ್ಷಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸಗೊಳಿಸಿದ್ದಾರೆ, ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ.

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಇದೇ ವೇಳೆ ಪೊಲೀಸರ ವಿರುದ್ದ ತಿರುಗಿಬಿದ್ದ ಜನರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿವೆ. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES