Tuesday, May 7, 2024

ಮತ ಚಲಾವಣೆಗೆ ಆಕ್ಸಿಜನ್​, ಬೆಡ್​ ಸಮೇತ ಮತಗಟ್ಟೆಗೆ ಬಂದ ವೃದ್ದೆ!

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃದ್ದೆಯೊಬ್ಬರು ಚಿಕಿತ್ಸೆಯ ನಡುವೆಯೇ ಇಂದು ಆಕ್ಸಿಜನ್​ ಮತ್ತು ಬೆಡ್​ ಸಮೇತ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ.

ಇದನ್ನೂ ಓದಿ:  ಮತದಾನಕ್ಕೆ ಬಂದಿದ್ದ ಮಹಿಳೆಗೆ ಹೃದಯ ಸ್ಥಂಭನ: ನೆರವಿಗೆ ದಾವಿಸಿದ ವೈದ್ಯ 

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES