Tuesday, May 7, 2024

ಮಾಜಿ ಪ್ರಧಾನಿ ದೇವೇಗೌಡ ದಂಪತಿಯಿಂದ ಮತದಾನ

ಹಾಸನ: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯು ಇಂದು ಭರದಿಂದ ಸಾಗುತ್ತಿದೆ. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರು ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 251ರಲ್ಲಿ ದಂಪತಿ ಸಮೇತ ತೆರಳಿ ಮತದಾನ ಮಾಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಸೆಲೆಬ್ರಿಟಿಗಳಿಂದ ಮತದಾನ

ಇದಕ್ಕೂ ಮುನ್ನ ಹೊಳೆನರಸೀಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯ, ಹರದನಹಳ್ಳಿಯ ದೇವೇಶ್ವರ ದೇವಾಲಯ ಹಾಗೂ ಮಾವಿನಕೆರೆಯ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ದೇವೇಗೌಡರು ಪೂಜೆ ಸಲ್ಲಿಸಿದರು. ಮತದಾನಕ್ಕೆ ಆಗಮಿಸಿದ ವೇಳೆ ಕೂಡ ಪಡುವಲಹಿಪ್ಪೆ ಗ್ರಾಮದ ಕೋದಂಡರಾಮ ದೇವಾಲಯದಲ್ಲೂ ಪೂಜೆ ಸಲ್ಲಿಸಿದ್ದಾರೆ.
ಬೆಳಗ್ಗೆ 9ಗಂಟೆಯವರೆಗೆ ಹಾಸನದಲ್ಲಿ 8.23% ಮತದಾನ ನಡೆದಿದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಹಾಗೂ ಕಾಂಗ್ರೆಸ್‌ನಿಂದ ಶ್ರೇಯಸ್ ಪಟೇಲ್ ಅಖಾಡದಲ್ಲಿದ್ದಾರೆ.

RELATED ARTICLES

Related Articles

TRENDING ARTICLES