Wednesday, May 8, 2024

ಏ.28 ಮತ್ತು 29 ಕರ್ನಾಟಕಕ್ಕೆ ಪ್ರಧಾನಿ: ಅಭ್ಯರ್ಥಿಗಳ ಪರ ಪ್ರಚಾರ

ಬೆಂಗಳೂರು : ಲೋಕಸಭಾ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಏ.28 ಮತ್ತು ಏ.29 ರಂದು  ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ. ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದು, ಈ ವೇಳೆ ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಾಳೆ, ನಾಡಿದ್ದು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಧಾನಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ರಾಜ್ಯದಲ್ಲಿ ಸಂಚರಿಸಲಿರುವ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

ಇದನ್ನೂ ಓದಿ: ಮತದಾನಕ್ಕೆ ಬಂದಿದ್ದ ಮಹಿಳೆಗೆ ಹೃದಯ ಸ್ಥಂಭನ: ನೆರವಿಗೆ ದಾವಿಸಿದ ವೈದ್ಯ

ನಾಳೆ ದಾವಣಗೆರೆ, ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಬಹಿರಂಗ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮರು ದಿನ ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ಆಯೋಜಿಸುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES