Friday, May 10, 2024

‘ಪವರ್ ಟಿವಿ’ ಹೋರಾಟಕ್ಕೆ ಜಯ : ಪ್ರಜ್ವಲ್ ರೇವಣ್ಣ ‘ಕಾಮ ಪುರಾಣ’ ಕೇಸ್ ತನಿಖೆಗೆ SIT ರಚನೆ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಾಮ ಪುರಾಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಎಸ್​ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜ್ವಲ್​​ ರೇವಣ್ಣ ಹೆಣ್ಣು ಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದು, ಇದನ್ನು ತನ್ನದೇ ಫೋನ್​ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಈ ವಿಡಿಯೋಗಳು ವೈರಲ್​ ಆಗಿದ್ದು, ಮಹಿಳೆಯರಿಗೆ ನ್ಯಾಯ ಸಿಗಬೇಕೆಂದು ‘ದಾರಿ ತಪ್ಪಿದ ಮೊಮ್ಮಗ’ ಎಂಬ ಶೀರ್ಷಿಕೆಯಡಿ ಪವರ್​ ಟಿವಿ ಸುದ್ದಿ ಬಿತ್ತಿರಿಸಿತ್ತು. ಇದೀಗ ಪವರ್​​ ಟಿವಿ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ.

RELATED ARTICLES

Related Articles

TRENDING ARTICLES