Friday, May 10, 2024

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ ತನಿಖೆಗೆ SIT ರಚಿಸಲು ತೀರ್ಮಾನ : ಸಿದ್ದರಾಮಯ್ಯ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಅವರು ಮಾಹಿತಿ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿವೆ. ಮೇಲ್ನೋಟಕ್ಕೆ ಮಹಿಳೆಯರ ಮೇಲೆ ಹಾಸನ ಸಂಸದರು ಲೈಂಗಿಕ ದೌರ್ಜನ್ಯ ಎಸಗಿರುವುದು ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಎಸ್​ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

ತನಿಖೆ ಭಯಕ್ಕೆ ಜರ್ಮನಿಗೆ ಪ್ರಜ್ವಲ್ ಪರಾರಿ?

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇಂದು ಬೆಳಗಿನ ಜಾವ 3 ಗಂಟೆಗೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿರೋ ಮಾಹಿತಿ ಲಭ್ಯವಾಗಿದೆ. ಪ್ರಜ್ವಲ್​​ ರೇವಣ್ಣ ಹೆಣ್ಣು ಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದು, ಇದನ್ನು ತನ್ನದೇ ಫೋನ್​ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಈ ವಿಡಿಯೋಗಳು ವೈರಲ್​ ಆಗಿದ್ದು, ಮಹಿಳೆಯರಿಗೆ ನ್ಯಾಯ ಸಿಗಬೇಕೆಂದು ‘ದಾರಿ ತಪ್ಪಿದ ಮೊಮ್ಮಗ’ ಎಂಬ ಶೀರ್ಷಿಕೆಯಡಿ ಪವರ್​ ಟಿವಿ ಸುದ್ದಿ ಬಿತ್ತಿರಿಸುತ್ತಿದೆ.

RELATED ARTICLES

Related Articles

TRENDING ARTICLES