Wednesday, May 8, 2024

ಕೊನೆಗೂ ರಾಜ್ಯಕ್ಕೆ ಬರಪರಿಹರ ಘೋಷಣೆ ಮಾಡಿದ ಕೇಂದ್ರ ಸರ್ಕಾರ!

ಬೆಂಗಳೂರು: ರಾಜ್ಯಕ್ಕೆ ಬರಬೇಕಾಗಿದ್ದ ಬರಪರಿಹಾರವನ್ನು ಕೇಂದ್ರ ಸರ್ಕಾರವು ಕೊನೆಗೂ ಬಿಡುಗಡೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ.

ಕರ್ನಾಟಕದಲ್ಲಿ ತೀವ್ರ ಬರಗಾಲದ ಹಿನ್ನೆಲೆ 18,171 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಈಗ ಕೇಂದ್ರ ಸರ್ಕಾರವು ಪರಿಶೀಲನೆ ನಡೆಸಿ 3,454 ಕೋಟಿ ರೂ. ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಅಮೇಠಿ, ರಾಯ್ ಬರೇಲಿಯಿಂದ ರಾಹುಲ್, ಪ್ರಿಯಾಂಕಾ ಸ್ಪರ್ಧೆ?

ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಸಕಾಲಕ್ಕೆ ಬಿಡುಗಡೆ ಮಾಡದ ಕಾರಣ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಅದರಂತೆ, ಕೇಂದ್ರ ಸರ್ಕಾರವು ಈಗ ಬರ ಪರಿಹಾರ ಘೋಷಣೆ ಮಾಡಿದೆ. ಹಾಗೆಯೇ, ನೆರೆ ರಾಜ್ಯವಾದ ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ ಮಾಡಿದೆ.

RELATED ARTICLES

Related Articles

TRENDING ARTICLES