ಬೆಂಗಳೂರು : ಬಲಿಷ್ಠ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ 196 ರನ್ಗಳ ಸವಾಲಿನ ಮೊತ್ತ ಪೇರಿಸಿತು.
ಅಟಲ್ ಬಿಹಾರಿ ವಾಜಪೇಯಿ (ಏಕನಾ) ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾದದ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು.
ಇನ್ನಿಂಗ್ಸ್ ಆರಂಭಿಸಿದ ಲಕ್ನೋಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ 8 ರನ್ಗೆ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಮಾರ್ಕಸ್ ಸ್ಟೋನಿಸ್ ಶೂನ್ಯಕ್ಕೆ ಔಟಾದರು. ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಲಕ್ನೋಗೆ ನಾಯಕ ಕೆ.ಎಲ್. ರಾಹುಲ್ ಹಾಗೂ ದೀಪಕ್ ಹೂಡಾ ಆಸೆಯಾದರು.
ಲಕ್ನೋ ಪರ ನಾಯಕ ಕೆ.ಎಲ್. ರಾಹುಲ್ (76) ಹಾಗೂ ದೀಪಕ್ ಹೂಡಾ (50) ಆಕರ್ಷಕ ಅರ್ಧಶತಕ ಸಿಡಿಸಿದರು. ಉಳಿದಂತೆ ಯಾವೊಬ್ಬ ಬ್ಯಾಟರ್ ಸಹ ಉತ್ತಮ ಪ್ರದರ್ಶನ ನೀಡಲಿಲ್ಲ. ನಿಕೋಲಸ್ ಪೂರನ್ 11, ಕೃನಾಲ್ ಪಾಂಡದಯ ಅಜೇಯ 18, ಆಯುಷ್ ಬದೋನಿ ಅಜೇಯ 15 ರನ್ ಸಿಡಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ಸಂದೀಪ್ ಶರ್ಮಾ 2, ಟ್ರೆಂಟ್ ಬೌಲ್ಟ್, ಆವೇಶ್ ಖಾನ್ ಹಾಗೂ ರವಿಚಂದ್ರನ್ ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು. ರಾಜಸ್ಥಾನ್ ರಾಯಲ್ಸ್ ಗೆಲ್ಲಲು 197 ರನ್ ಗಳಿಸಬೇಕಿದೆ.