Thursday, May 9, 2024

ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ನೀಡೋವರೆಗೂ ಏಕೆ ರಾಜ್ಯಕ್ಕೆ ಒಂದು ಪೈಸೆಯನ್ನೂ ಕೊಡಲಿಲ್ಲ ಮೋದಿಯವರೇ: ಸಿ.ಎಂ.ಪ್ರಶ್ನೆ

ಬಾಗಲಕೋಟೆ: ರಾಜ್ಯಕ್ಕೆ ಬರಪರಿಹಾರ ನೀಡುವಂತೆ ಮನವಿ ಮಾಡಿಕೊಂಡರೂ ಕೇಳದೆ, ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ಕೊಡುವವರೆಗೂ ಏಕೆ ರಾಜ್ಯಕ್ಕೆ ಒಂದು ಪೈಸೆಯನ್ನೂ ಕೊಡಲಿಲ್ಲ ಮೋದಿಯವರೇ. ಇಂಥಾ ದ್ರೋಹ ಏಕೆ ಮಾಡಿದ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಗೆಲುವಿನ ಸಂದೇಶ ನೀಡಲು ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯಕ್ಕೆ ಭೀಕರ ಬಿಸಿಲು ಬರಗಾಲ ಬಂದಿದೆ. ರಾಜ್ಯದ ಪಾಲಿನ ಬರ ಪರಿಹಾರ ಕೊಡಿ ಕೊಡಿ ಅಂತ ಕೇಳಿ ಕೇಳಿ ಸಾಕಾಯ್ತು. ದೆಹಲಿಗೆ ಬಂದು ಪ್ರತಿಭಟನೆ ಮಾಡಿದ್ವಿ. ಆದ್ರೂ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆವು ಬಳಿಕ ಸುಪ್ರೀ ಕೋರ್ಟ್​ ಸೂಚನೆಯಂತೆ ಬರ ಪರಿಹಾರ ಹಣ ಘೋಷಣೆ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ಕೇಂದ್ರದಿಂದ ಬರ ಪರಿಹಾರ ಹಣ ಘೋಷಣೆ : ರಾಜ್ಯ ಕಾನೂನು ಹೋರಾಟಕ್ಕೆ ಸಿಕ್ಕ ಜಯ- ಸಚಿವ ಕೃಷ್ಣ ಭೈರೇಗೌಡ

ಗದ್ದಿಗೌಡರ್​ರನ್ನು ಸೋಲಿಸಬೇಕು:

ಈ ಬಾರಿ ನೀವು ಬಿಜೆಪಿಯ ಗದ್ದಿಗೌಡರನ್ನು ಸೋಲಿಸಲೇ ಬೇಕು. ಕಾಂಗ್ರೆಸ್ಸಿನ ಸಂಯುಕ್ತ ಪಾಟೀಲ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿ ಆಗಿರ್ತಾರೆ. ಆದ್ದರಿಂದ ಗೆಲ್ಲಿಸಿ ಕಳಯಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಗದ್ದಿಗೌಡರೇ ಇಷ್ಟು ವರ್ಷ ನೀವು ಪಾರ್ಲಿಮೆಂಟಿನಲ್ಲಿ ರಾಜ್ಯದ ಪರವಾಗಿ ಬಾಯಿಯನ್ನೇ ಬಿಟ್ಟಿಲ್ಲ. ರಾಜ್ಯಕ್ಕೆ ಬರ ಬಂದಾಗಲೂ ಬಾಯಿ ಬಿಡಲಿಲ್ಲ. ಪ್ರವಾಹ ಬಂದಾಗಲೂ ಬಾಯಿ ಬಿಡಲಿಲ್ಲ. ಬಾಗಲಕೋಟೆ ಜಿಲ್ಲೆಯ ಜನರ ಪರವಾಗಿ, ಜಿಲಗಲೆಯ ಅಭಿವೃದ್ಧಿ ಪರವಾಗಿಯೂ ಬಾಯಿ ಬಿಡಲಿಲ್ಲ. ಇದು ನಿಮಗೆ ಬಿದ್ದ ಓಟಿಗೆ ನೀವು ಮಾಡಿದ ಅವಮಾನ ಅಲ್ಲವೇ ಎಂದು ಸಂಸದ ಗದ್ದಿಗೌಡರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

20 ವರ್ಷ ನಿಮ್ಮ ಪರವಾಗಿ ಒಂದೂ ಮಾತಾಡದ ಗದ್ದಿಗೌಡರನ್ನು ಮನೆಗೆ ಕಳುಹಿಸಿ. ಅವರು ಸ್ವಲ್ಪ ವಿಶ್ರಾಂತಿ ಪಡೆಯಲಿ. ಈ ಬಾರಿ ಸಂಯುಕ್ತ ಪಾಟೀಲ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ. ಸಂಯುಕ್ತ ಪಾರ್ಲಿಮೆಂಟಿನಲ್ಲಿ ಬಾಗಲಕೋಟೆ ಜನರ ಧ್ವನಿ ಆಗಿರ್ತಾರೆ, ರಾಜ್ಯದ ಜನರ ಧ್ವನಿ ಆಗಿರ್ತಾರೆ ಎಂದರು.

ಸಚಿವರಾದ ತಿಮ್ಮಾಪುರ್, ಶಿವಾನಂದ ಪಾಟೀಲ್, ಮಾಜಿ ಅಚಿವರಾದ ಲಕ್ಷ್ಮಣ ಸವದಿ, ವಿನಯ್ ಕುಲಕರ್ಣಿ, ಎಸ್.ಆರ್.ಪಾಟೀಲ್, ಶಾಸಕರುಗಳಾದ ಉಮಾಶ್ರೀ, ವಿಜಯಾನಂದ ಕಾಶಪ್ಪನವರ್, ಜೆ.ಟಿ.ಪಾಟೀಲ್, ಸುನಿತ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ, ರಾಜು ಚಿಮ್ಮನಕಟ್ಟಿ, ಬಿ.ಆರ್.ಯಾವಗಲ್, ಜಿಲ್ಲಾ ಮುಖಂಡರುಗಳಾದ ಸುಣಗಾರ, ಕೊಣ್ಣೋರ, AICC ಉಸ್ತುವಾರಿ ಸಯ್ಯದ್, ಸಂಜಯ್ಯನ ಮಠ್, ಆನಂದ ನ್ಯಾಮಗೌಡ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES