Monday, May 13, 2024

ಚಾಲನಕ ನಿಯಂತ್ರಣ ತಪ್ಪಿ ವಾಹನ ಪಲ್ಟಿ: ಇಬ್ಬರು ಸಾವು

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು ಇಬ್ಬರು ಸಾವನ್ನಪ್ಪಿದ್ದು ಏಳು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ನಯನ (12), ಪೇಮಮ್ಮ(50) ವರ್ಷ ಮೃತ ದುರ್ದೈವಿಗಳು, ಚಿಕ್ಕನಾಯಕನಹಳ್ಳಿ ತಾಲೂಕಿನ ಕಪ್ಪೂರು-ಕುರುಬರಹಳ್ಳಿ ಬಳಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಅಶ್ಲೀಲ ವೀಡಿಯೋ ಪ್ರಕರಣ SIT ತನಿಖೆಗೆ ಆದೇಶ : ಜರ್ಮನಿಗೆ ಹಾರಿದ ಪ್ರಜ್ವಲ್​ ರೇವಣ್ಣ

ತಿಪಟೂರಿನ ಹೊನ್ನವಳ್ಳಿಯಲ್ಲಿ ನಡೆಯುತ್ತಿರುವ ಶ್ರೀಕಾಲಭೈರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ್ದು ವಾಹನ ಪಲ್ಟಿಯಾಗಿದೆ. ಗಾಯಾಳುಗಳನ್ನು ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES