Tuesday, May 14, 2024

ಮದುವೆ ದಿಬ್ಬಣದ ಲಾರಿ ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಬಳ್ಳಾರಿ : ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದಲ್ಲಿ ನಡೆದಿದೆ.

ಭಾಗ್ಯಮ್ಮ(44) ಮತ್ತು ಮಾರೆಮ್ಮ(45) ಮೃತ ರ್ದುದೈವಿಗಳು. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಬಳ್ಳಾರಿಯ ಟ್ರಾಮಾಕೇರ್ ಸೆಂಟರ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು

ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರು ಸಾವನ್ನಪ್ಪಿರುವ ಮತ್ತೊಂದು ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಇಂದು ನಡೆದ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ರಥೋತ್ಸವದ ವೇಳೆ ದುರ್ಘಟನೆ ನಡೆದಿದೆ.

ಜಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಈ ವೇಳೆ ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿದ್ದಾರೆ. ಇನ್ನು ತೀವ್ರವಾಗಿ ಗಾಯಗೊಂಡ ಓರ್ವ ವ್ಯಕ್ತಿಯನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES