Sunday, May 12, 2024

ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ: ಇಂದಿನಿಂದಲೇ SIT ತನಿಖೆ ಆರಂಭ- ಸಚಿವ ಜಿ.ಪರಮೇಶ್ವರ್​

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು (SIT) ತಂಡ ವಿಚಾರಣೆಯನ್ನು ಇಂದು ಏ.28 ಭಾನುವಾರವೇ ಆರಂಭಿಸಲಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್​ ಅವರು ತಿಳಿಸಿದ್ದಾರೆ.

ಈ ಕುರಿತು ಮಾದ್ಯಮ ಪ್ರತಿಕ್ರಿಯೆ ನೀಡಿದ ಅವರು, ಎಸ್ ಐಟಿ ಇನ್ನು ಕೆಲವೇ ಹೊತ್ತಿನಲ್ಲಿ ತನಿಖೆ ಆರಂಭಿಸಲಿದೆ. ಪ್ರಜ್ವಲ್ ರೇವಣ್ಣ ಅವರಿಗೆ ನೊಟೀಸ್ ಜಾರಿ ಮಾಡುವುದು ಅಥವಾ ಬಿಡುವುದು ಎಸ್ ಐಟಿಗೆ ಬಿಟ್ಟ ತೀರ್ಮಾನ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಯಾವುದೇ ಹಸ್ತಕ್ಷೇಪವಿಲ್ಲದೆ ತನಿಖೆ ನಡೆಯಲಿದೆ ಎಂದರು. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಕೂಡ ಇದೆ ಎಂದು ಹೇಳಿದರು.

ಇದನ್ನೂ ಓದಿ: ಅಶ್ಲೀಲ ವೀಡಿಯೋ ಪ್ರಕರಣ SIT ತನಿಖೆಗೆ ಆದೇಶ : ಜರ್ಮನಿಗೆ ಹಾರಿದ ಪ್ರಜ್ವಲ್​ ರೇವಣ್ಣ

ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದರು.

RELATED ARTICLES

Related Articles

TRENDING ARTICLES