Monday, May 13, 2024

ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಪ್ರಕರಣ: ಅಜ್ಞಾತ ಸ್ಥಳದಲ್ಲಿ ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಂಡ ಪೊಲೀಸ್

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣ ಸಂಬಂಧ ಹಾಸನ ಪೊಲೀಸರು ತನಿಖೆ ಆರಂಭಿಸಿದ್ದು ಸಂತ್ರಸ್ತೆಯರ ಹೇಳಿಕೆಯನ್ನು ಹಾಸನ ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಪವರ್‌ ಟಿವಿಯಲ್ಲಿ ರಾಸಲೀಲೆ ವರದಿ ಪ್ರಸಾರ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಅಜ್ಞಾತ ಸ್ಥಳದಲ್ಲಿ ಸಂತ್ರಸ್ತೆಯರ ಹೇಳಿಕೆ ಪಡೆದಿದ್ದಾರೆ. ಪ್ರಜ್ವಲ್‌ ರಾಸಲೀಲೆ ಬಗ್ಗೆ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯರ ದೂರು ಸಲ್ಲಿಸಿದ ಬೆನ್ನಲ್ಲೇ ಹಾಸನ ಪೊಲೀಸರಿಗೆ ಮಹಿಳಾ ಆಯೋಗ ಮಾಹಿತಿ ನೀಡಿತ್ತು. ಮಹಿಳಾ ಆಯೋಗ ಮಾಹಿತಿ ಆಧಾರದ ಮೇಲೆ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ: ತಪ್ಪು ಮಾಡಿದವರು ನೀರು ಕುಡಿಯಲೇ ಬೇಕು-HDK

ADGP ಬಿ.ಕೆ.ಸಿಂಗ್ ನೇತೃತ್ವದಲ್ಲಿ SIT ತನಿಖೆ :

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಸಿಕ್ಕಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಇಂದು ಭಾನುವಾರ ಎಡಿಜಿಪಿ ಬಿ ಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ ಐಟಿ ತಂಡ ರಚಿಸಲಾಗಿದೆ.

ನಾವು ಅವರ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಇದ್ದು ಅವರಿಗೆ ನೊಟೀಸ್ ನೀಡಿ ಕರೆಸಿ ತನಿಖೆ ಮಾಡುವ ಬಗ್ಗೆ ಹಿರಿಯ ಪೊಲೀಸ್ ತನಿಖಾಧಿಕಾರಿಗಳೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಎಡಿಜಿಪಿ ಬಿ.ಕೆ ಸಿಂಗ್ ಅವರು ಈ ಹಿಂದೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ಮುಖ್ಯಸ್ಥರಾಗಿದ್ದರು. 3 ಎಸ್ ಪಿ, 4 ಡಿವೈಎಸ್ ಪಿ ಗಳನ್ನೊಳಗೊಂಡ ಎಸ್ಐಟಿ ರಚನೆಯಾಗಿದ್ದು, ಮೂವರು ಎಸ್ ಪಿಗಳಲ್ಲಿ ಓರ್ವ ಮಹಿಳಾ ಎಸ್ ಪಿಗೆ ಕೂಡ ಇದ್ದಾರೆ ಎಂದರು.

RELATED ARTICLES

Related Articles

TRENDING ARTICLES