Monday, May 13, 2024

ಟಾಸ್ ಗೆದ್ದ RCB ಬೌಲಿಂಗ್ : ಸ್ಪೋಟಕ ಆಲ್​ರೌಂಡರ್ ಕಂಬ್ಯಾಕ್ : RCB ಗೆಲ್ಲುತ್ತಾ? ಕಾಮೆಂಟ್ ಮಾಡಿ

ಬೆಂಗಳೂರು : ಗುಜರಾತ್‌ ಟೈಟಾನ್ಸ್‌ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ (ಫೀಲ್ಡಿಂಗ್) ಆಯ್ಕೆ ಮಾಡಿಕೊಂಡರು. RCBಗೆ ಸ್ಫೋಟಕ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಕಂಬ್ಯಾಕ್ ಮಾಡಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್​ನ 45ನೇ ರೋಚಕ ಪಂದ್ಯ ನಡೆಯುತ್ತಿದೆ. ತವರು ಅಂಗಳದಲ್ಲಿ ಆರ್​ಸಿಬಿ ತಂಡವನ್ನು ಮಣಿಸಿ ಪ್ಲೇಆಫ್​ಗೆ ಹತ್ತಿರವಾಗಲು ಗುಜರಾತ್ ಸಜ್ಜಾಗಿದೆ.

ಪ್ರಸಕ್ತ ಟೂರ್ನಿಯಲ್ಲಿ ಆರ್​ಸಿಬಿ 9 ಪಂದ್ಯಗಳನ್ನು ಆಡಿದೆ. ಈ ಪೈಕಿ 2 ಪಂದ್ಯ ಗೆದ್ದು ಬರೋಬ್ಬರಿ 7 ಪಂದ್ಯಗಳಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಗುಜರಾತ್ ಟೈಟಾನ್ಸ್​ ಸಹ 9 ಪಂದ್ಯಗಳನ್ನು ಆಡಿದೆ. ಇದರಲ್ಲಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 5 ಪಂದ್ಯಗಳನ್ನು ಕೈಚೆಲ್ಲಿದೆ. 8 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

RCB Vs GT ಬಲಾಬಲ

  • ಒಟ್ಟು ಪಂದ್ಯ : 3
  • ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು : 1 ಗೆಲುವು
  • ಗುಜರಾತ್‌ ಟೈಟಾನ್ಸ್‌ : 2 ಗೆಲುವು

ಎಂ.ಚಿನ್ನಸ್ವಾಮಿ ಸ್ಟೇಡಿಯಂ (ಬೆಂಗಳೂರು)

  • ಒಟ್ಟು ಪಂದ್ಯ : 1
  • ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು : 0
  • ಗುಜರಾತ್‌ ಟೈಟಾನ್ಸ್‌ : 1 ಗೆಲುವು

ಮೋದಿ ಸ್ಟೇಡಿಯಂ (ಅಹಮದಾಬಾದ್‌)

  • ಒಟ್ಟು ಪಂದ್ಯ : 2
  • ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು : 1 ಗೆಲುವು
  • ಗುಜರಾತ್‌ ಟೈಟಾನ್ಸ್‌ : 1 ಗೆಲುವು

ರಾಯಲ್ ಚಾಲೆಂಜರ್ಸ್ ಬೆಂಗಳೂರು

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿ.ಕೀ.), ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್

ಗುಜರಾತ್ ಟೈಟಾನ್ಸ್

ವೃದ್ಧಿಮಾನ್ ಸಹಾ (ವಿ.ಕೀ.), ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ

RELATED ARTICLES

Related Articles

TRENDING ARTICLES