Monday, May 13, 2024

ಟಾಸ್ ಗೆದ್ದ SRH ಬೌಲಿಂಗ್ ಆಯ್ಕೆ : ತವರು ಅಂಗಳದಲ್ಲಿ ಇಂದಾದರೂ CSK ಗೆಲ್ಲುತ್ತಾ? ಕಾಮೆಂಟ್ ಮಾಡಿ

ಬೆಂಗಳೂರು : ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಐಪಿಎಲ್​ನ 46ನೇ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಹಾಲಿ ಚಾಂಪಿಯನ್​ ಚೆನ್ನೈ ತಂಡವನ್ನು ಅವರ ತವರು ಅಂಗಳದಲ್ಲೇ ಮಣಿಸಲು ಹೈದರಾಬಾದ್ ರಣತಂತ್ರ ರೂಪಿಸಿದೆ. ಇತ್ತ, ಚೆನ್ನೈ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಪ್ರಸಕ್ತ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 8 ಪಂದ್ಯಗಳನ್ನು ಆಡಿದೆ. ಈ ಪೈಕಿ 4 ಪಂದ್ಯ ಗೆದ್ದು, 4 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಸನ್‌ರೈಸರ್ಸ್ ಹೈದರಾಬಾದ್ 8 ಪಂದ್ಯಗಳನ್ನಾಡಿದ್ದು, 5 ಗೆಲುವು ಹಾಗೂ 3 ಸೋಲು ಕಂಡಿದೆ. ಹೈದರಾಬಾದ್ 10 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಚೆನ್ನೈ 8 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್

ಅಜಿಂಕ್ಯ ರಹಾನೆ, ಋತುರಾಜ್ ಗಾಯಕ್ವಾಡ್ (ನಾಯಕ), ಡೇರಿಲ್ ಮಿಚೆಲ್, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂ.ಎಸ್. ಧೋನಿ (ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರೆಹಮಾನ್, ಮತೀಶ ಪತಿರಾನ

ಚೆನ್ನೈ ಇಂಪ್ಯಾಕ್ಟ್ ಪ್ಲೇಯರ್ : ಸಮೀರ್ ರಿಜ್ವಿ, ಶಾರ್ದೂಲ್ ಠಾಕೂರ್, ಶೇಕ್ ರಶೀದ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್

ಸನ್‌ರೈಸರ್ಸ್ ಹೈದರಾಬಾದ್

ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಐಡೆನ್ ಮರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ. ನಟರಾಜನ್

ಹೈದರಾಬಾದ್ ಇಂಪ್ಯಾಕ್ಟ್ ಪ್ಲೇಯರ್ : ಉಮ್ರಾನ್ ಮಲಿಕ್, ಮಯಾಂಕ್ ಮಾರ್ಕಾಂಡೆ, ಅನ್ಮೋಲ್ಪ್ರೀತ್ ಸಿಂಗ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್

RELATED ARTICLES

Related Articles

TRENDING ARTICLES