Monday, May 13, 2024

ದತ್ತಪೀಠದಲ್ಲಿ 100 ಅಡಿ ಕಂದಕಕ್ಕೆ ಉರುಳಿದ ಬಸ್ : ಬಾಲಕ ಸಾವು, 20 ಮಂದಿಗೆ ಗಾಯ

ಚಿಕ್ಕಮಗಳೂರು : ಪ್ರವಾಸಿ ಬಸ್ ಪಲ್ಟಿಯಾಗಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತಾಲೂಕಿನ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕ್ಕಮಗಳೂರು ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರವಾಸಿಗರೆಲ್ಲರೂ ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರು ಎಂದು ತಿಳಿಸುಬಂದಿದೆ. ಇವರೆಲ್ಲರೂ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ದತ್ತಪೀಠ ಹಾಗೂ ಮಾಣಿಕ್ಯಾಧಾರ ಮಾರ್ಗ ಮಧ್ಯೆ ದುರ್ಘಟನೆ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? : ವಿಷಹಾರ ಸೇವಿಸಿ ಇಬ್ಬರು ಪುಟ್ಟ ಕಂದಮ್ಮಗಳು ಸಾವು, ಮೂವರು ಅಸ್ವಸ್ಥ

ಪ್ರವಾಸಿಗರು ಮಾಣಿಕ್ಯಧಾರ ನೋಡಿಕೊಂಡು ವಾಪಸ್ ಕೆಳಗೆ ಇಳಿಯುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ 100 ಅಡಿ ಎತ್ತರದಿಂದ ಕೆಳಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ತೀವ್ರ ಅಸ್ವಸ್ಥನಾಗಿದ್ದ 6 ವರ್ಷದ ಬಾಲಕ ಮಹಮದ್‌ ನವಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES