Friday, May 17, 2024

ಪ್ರಜ್ವಲ್ ರಾಸಲೀಲೆ ಪ್ರಕರಣ : ಮೋದಿ ದೇಶದ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು : ಓವೈಸಿ ಒತ್ತಾಯ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ (AIMIM) ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ದೇಶದ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಹಾಸನ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಿದ್ದರು. ಈ ಅಭ್ಯರ್ಥಿಯು ಮಹಿಳೆಯರ ಮೇಲೆ ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ. ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಸಂತ್ರಸ್ಥ ಮಹಿಳೆಯರೇ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಅಭ್ಯರ್ಥಿಯು ಬ್ಲ್ಯಾಕ್‌ಮೇಲ್ ಮಾಡಲು ಸಾವಿರಾರು ವಿಡಿಯೋಗಳನ್ನು ಮಾಡಿದ್ದಾರೆ. ಈ ವ್ಯಕ್ತಿಯ ಹಿನ್ನೆಲೆಯ ಬಗ್ಗೆ ಬಿಜೆಪಿಗೆ ತಿಳಿದಿತ್ತು. ಆದರೂ, ಪ್ರಧಾನಿ ಮೋದಿ ಆ ಅಭ್ಯರ್ಥಿಯನ್ನು ಬೆಂಬಲಿಸಿದರು. ನಾರಿ ಶಕ್ತಿ, ಮಂಗಳ ಸೂತ್ರಗಳ ರಕ್ಷಣೆ ಇತ್ಯಾದಿ ಬಗ್ಗೆ ಮೋದಿಯವರ ಹೇಳಿಕೆಗಳು ಏನಾಯಿತು? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಜ್ವಲ್ ಭಾರತದಿಂದ ಪರಾರಿಯಾಗಿದ್ದಾರೆ

ಇದೀಗ ಪ್ರಜ್ವಲ್ ರೇವಣ್ಣ ಭಾರತದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಮೋದಿಯವರು ಭಾರತದ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು. ಮೋದಿಯವರು ಈ ಬಗ್ಗೆ ವಿವರಣೆ ನೀಡಬೇಕು. ಭಾರತದ ಹೆಣ್ಣು ಮಕ್ಕಳ ಘನತೆಯ ಮೇಲೆ ಅಧಿಕಾರವನ್ನು ಏಕೆ ಆರಿಸಿಕೊಂಡಿದ್ದೀರಾ? ಎಂದು ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES